Advertisement

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

06:25 PM Nov 29, 2024 | Team Udayavani |

ಪಂಜಾಬ್: ಇತ್ತೀಚಿಗೆ ಟೀಮ್ ಇಂಡಿಯಾದ ಮಾಜಿ ಆಟಗಾರ, ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ತನ್ನ ಪತ್ನಿ ನವಜೋತ್ ಕೌರ್ ಅವರು ನಾಲ್ಕನೇ ಹಂತದ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಯಾವುದೇ ಔಷಧ ಪಡೆಯದೇ ಕಟ್ಟುನಿಟ್ಟಾದ ಆಹಾರ ಪದ್ದತಿಯಿಂದಲೇ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ ಎಂದು ಹೇಳಿಕೆ ನೀಡಿದ ಬೆನ್ನಲೇ ಸಿದ್ದುಗೆ ಛತ್ತೀಸ್‌ಗಢ ಸಿವಿಲ್ ಸೊಸೈಟಿಯು ಲೀಗಲ್ ನೋಟಿಸ್ ಜಾರಿ ಮಾಡಿದೆ.

Advertisement

ನೋಟಿಸ್ ಜಾರಿ ಮಾಡಿದ ಸಿವಿಲ್ ಸೊಸೈಟಿ, ಸಿಧು ಸುಳ್ಳು ಮಾಹಿತಿ ನೀಡಿ ಕ್ಯಾನ್ಸರ್ ರೋಗಿಗಳ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದು ಅಲ್ಲದೆ ಪತ್ನಿ ಯಾವುದೇ ಔಷಧ ಪಡೆಯದೆಯೇ ಕೇವಲ ನಿಂಬೆ ರಸ, ಹಸಿರು ಎಲೆ, ಅರಶಿನ, ತುಳಸಿ ಮುಂತಾದ ಪದಾರ್ಥಗಳನ್ನು ಬಳಸಿಕೊಂಡು ಕೇವಲ ನಲವತ್ತು ದಿನಗಳಲ್ಲಿ ನಾಲ್ಕನೇ ಹಂತದ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ ಎಂದು ಮಾಧ್ಯಮದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಇದು ಕ್ಯಾನ್ಸರ್ ರೋಗಿಗಳನ್ನು ದಾರಿ ತಪ್ಪಿಸುವ ಹೇಳಿಕೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದು,  ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಒಂದು ವಾರದೊಳಗೆ ಸಲ್ಲಿಸಬೇಕು ಇಲ್ಲವಾದಲ್ಲಿ 850 ಕೋಟಿ ರೂ. ಪರಿಹಾರ ನೀಡುವಂತೆ ಛತ್ತೀಸ್‌ಗಢ ಸಿವಿಲ್ ಸೊಸೈಟಿ ನೋಟಿಸ್ ಜಾರಿ ಮಾಡಿದೆ.

ಇನ್ನು ಸಿಧು ಹೇಳಿಕೆಯನ್ನು ಕೆಲ ವೈದ್ಯರೂ ಖಂಡಿಸಿದ್ದು ಈ ಹೇಳಿಕೆಯಲ್ಲಿ ಯಾವುದೇ ಆಧಾರವಿಲ್ಲ ಅಲ್ಲದೆ ಕ್ಯಾನ್ಸರ್ ಗುಣಪಡಿಸಲು ವಿಕಿರಣ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಮತ್ತು ಕೀಮೋಥೆರಪಿಯಂತಹ ಚಿಕಿತ್ಸೆಗಳಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Advertisement
Advertisement

Udayavani is now on Telegram. Click here to join our channel and stay updated with the latest news.

Next