ಮುಂಬಯಿ: ನವೋದಯ ಕಲಾರಂಗ ಮುಂಬಯಿ 30 ನೇ ವಾರ್ಷಿಕೋತ್ಸವ ಸಂಭ್ರಮವು ಫೆ. 4 ರಂದು ಅಪರಾಹ್ನ 2.30 ರಿಂದ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಪುರೋಹಿತ ಡಾ| ಪ್ರವೀಣ್ ಜೆ. ಭಟ್ ಅವರು ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಬೋಂಬೆ ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ ವಹಿಸಿದ್ದರು.
ಗೌರವ ಅತಿಥಿಗಳಾಗಿ ಬೋಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ನ್ಯಾಯವಾದಿ ಸುಭಾಶ್ ಬಿ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಎಲ್. ಸುವರ್ಣ, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಉಪಾಧ್ಯಕ್ಷ ಅರವಿಂದ ಶೆಟ್ಟಿ, ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ್ ಪಿ. ಸಾಲ್ಯಾನ್ ಬಜೆಗೋಳಿ, ಬಿಲ್ಲವರ ಅಸೋಸಿಯೇಶನ್ ಅಂಧೇರಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ರವೀಂದ್ರ ಎಸ್. ಕೋಟ್ಯಾನ್, ಉದ್ಯಮಿ ಹರೀಶ್ ಜಿ. ಅಮೀನ್, ಬಿಲ್ಲವರ ಅಸೋಸಿಯೇಶನ ಮಲಾಡ್ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಪೂಜಾರಿ, ಬಂಟರ ಸಂಘ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಲತಾ ಜಯರಾಮ್ ಶೆಟ್ಟಿ ಹಾಗೂ ನ್ಯಾಯವಾದಿ ಸೌಮ್ಯಾ ಸಿ. ಪೂಜಾರಿ ಅವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸಂಸ್ಥೆಯ ಸಾಧಕ ಪುರಸ್ಕಾರವನ್ನು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ, ಚಲನಚಿತ್ರ ನಿರ್ದೇಶಕ, ನಟ, ನಿರ್ಮಾಪಕ ಡಾ| ರಾಜಶೇಖರ್ ಕೋಟ್ಯಾನ್ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಿ ಗೌರವಿಸಲಾಯಿತು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಚಲನಚಿತ್ರ ನಟ, ರಂಗಭೂಮಿ ಕಲಾವಿದ ಭವಾನಿ ಶಂಕರ್ ಶೆಟ್ಟಿ, ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ಅಧ್ಯಕ್ಷ, ರಂಗಕಲಾವಿದ ನವೀನ್ ಶೆಟ್ಟಿ ಇನ್ನಬಾಳಿಕೆ, ಬಿಲ್ಲವರ ಅಸೋಸಿಯೇಶನ್ ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಅಶೋಕ್ ಸಸಿಹಿತ್ಲು ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು. ರಂಗಕಲಾವಿದ ಜಿ.ಕೆ. ಕೆಂಚನಕೆರೆ ಅವರು ಕಾರ್ಯಕ್ರಮ ನಿರ್ವಹಿಸಿದರು.
ಸಂಸ್ಥೆಯ ಅಧ್ಯಕ್ಷ ಎಸ್. ಟಿ. ವಿಜಯಕುಮಾರ್, ಗೌರವ ಪ್ರಧಾನ ಕಾರ್ಯದರ್ಶಿ
ಪ್ರತಿಮಾ ಬಂಗೇರ, ಗೌರವ ಕೋಶಾಧಿಕಾರಿ ಚಂದ್ರಕಾಂತ್ ಸಸಿಹಿತ್ಲು ಹಾಗೂ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಸದಸ್ಯ ಬಾಂಧವರಿಂದ ನೃತ್ಯ ವೈವಿಧ್ಯ ಹಾಗೂ ರವಿ ಆಚಾರ್ಯ ರಚಿಸಿ, ಚಂದ್ರಕಾಂತ್ ಸಾಲ್ಯಾನ್ ಇವರ ನಿರ್ದೇಶನದಲ್ಲಿ ಪಗಡೆದ ಪಂತ ತುಳು ಪೌರಾಣಿಕ ನಾಟಕವು ಸಂಸ್ಥೆಯ ಕಲಾವಿದರುಗಳಿಂದ ಪ್ರದರ್ಶನಗೊಂಡು ಕಲಾಪ್ರೇಮಿಗಳ ಮನರಂಜಿಸಿತು. ಕಲಾಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಸುಭಾಶ್ ಶಿರಿಯಾ