ಥಾಣೆ: ಮುಲುಂಡ್-ಥಾಣೆಯ ಹೃದಯ ಭಾಗದಲ್ಲಿರುವ ಮುಲುಂಡ್ ಚೆಕ್‌ನಾಕಾ ಸಮೀಪದ ಶಿವಾಜಿ ನಗರದಲ್ಲಿರುವ ನವೋದಯ ಜ್ಯೂನಿಯರ್ ಕಾಲೇಜು ಮತ್ತು ಕಿಸನ್ ನಗರದಲ್ಲಿರುವ ನವೋದಯ ಇಂಗ್ಲೀಷ್ ಹೈಸ್ಕೂಲ್‌ನ ಸಂಚಾಲಕ ಸಂಸ್ಥೆ ನವೋದಯ ಕನ್ನಡ ಸೇವಾ ಸಂಘ ಥಾಣೆ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಈ ನಿಮಿತ್ತ ವರ್ಷಪೂರ್ತಿ ನಡೆಯಲಿರುವ ಸುವರ್ಣ ಮಹೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವು ಜು. 15 ರಂದು ಅಪರಾಹ್ನ 2 ರಿಂದ ರಾತ್ರಿ 10 ರವರೆಗೆ ಚೆಂಬೂರು ಆರ್. ಸಿ. ಮಾರ್ಗ ಫೈನ್ ಆರ್ಟ್ಸ್ ಚೌಕ್‌ನ ಫೈನ್‌ಆಟ್ಸ್ ì ಸೆಂಟರ್ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.
ಆಶೀರ್ವಚನ
ನವೋದಯ ಕನ್ನಡ ಸೇವಾ ಸಂಘ ಥಾಣೆ ಇದರ ಅಧ್ಯಕ್ಷ ಜಯ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಈ ಭವ್ಯ ಸಮಾರಂಭವನ್ನು ಶ್ರೀ ಕ್ಷೇತ್ರ ಒಡಿಯೂ ರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾ ನಂದ ಸ್ವಾಮೀಜಿ ಅವರು ದೀಪಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಎಂಆರ್‌ಜಿ ಗ್ರೂಪ್‌ನ ಕಾರ್ಯಾಧ್ಯಕ್ಷ ಪ್ರಕಾಶ್ ಶೆಟ್ಟಿ, ಗೌರವ ಅತಿಥಿಗಳಾಗಿ ಬಿಸಿಸಿಐನ ಮಾಜಿ ಜನರಲ್ ಮ್ಯಾನೇಜರ್ ಪ್ರೊ| ರತ್ನಾಕರ ಶೆಟ್ಟಿ, ಗ್ರಾÂಂಟ್‌ರೋಡ್ ಕೃಷ್ಣ ಪ್ಯಾಲೇಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕ ಕೃಷ್ಣ ವೈ. ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರು ಉಪಸ್ಥಿತರಿದ್ದರು.
ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ್ ಎಸ್. ಶೆಟ್ಟಿ, ಕೋಶಾಧಿಕಾರಿ ಸುನಿಲ್ ಎಸ್. ಶೆಟ್ಟಿ, ಉಪಾಧ್ಯಕ್ಷ ಕೇಶವ ಟಿ. ನಾಯಕ್, ಜತೆ ಕಾರ್ಯದರ್ಶಿ ಪ್ರಶಸ್ತ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ದಯಾನಂದ್ ಬಿ. ಹೆಗ್ಡೆ ಹಾಗೂ ಇತರ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯ ಬಾಂಧವರ ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ವೈವಿಧ್ಯ, ಸಭಾ ಕಾರ್ಯಕ್ರಮದ ಬಳಿಕ ಸುರತ್ಕಲ್ ಕುಳಾಯಿಯ ಕಲಾಕುಂಭ ಸಾಂಸ್ಕೃತಿಕ ವೇದಿಕೆಯ ಕಲಾವಿದರ ಕೂಡುವಿಕೆಯಲ್ಲಿ ತುಳುನಾಡ ವೈಭವ ಕಾರ್ಯಕ್ರಮದ ಪ್ರದರ್ಶನಗೊಂಡಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಸುಭಾಷ್ ಶಿರಿಯಾ