Advertisement

Navratri: ದಾಖಲೆ ಪ್ರಮಾಣದ ಪ್ರಯಾಣಿಕ ವಾಹನಗಳ ಮಾರಾಟ

12:47 AM Nov 02, 2023 | Pranav MS |

ಹೊಸದಿಲ್ಲಿ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಕಳೆದ ತಿಂಗಳು ದೇಶದಲ್ಲಿ ದಾಖಲೆ ಪ್ರಮಾಣದ ಪ್ರಯಾಣಿಕ ವಾಹನಗಳು ಮಾರಾಟವಾಗಿವೆ. ಸಗಟು ಮಾರಾಟದಲ್ಲಿ ಅಕ್ಟೋಬರ್‌ನಲ್ಲಿ ಒಟ್ಟು 3,91,472 ಪ್ರಯಾಣಿಕ ವಾಹನಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಮಾರಾಟದಲ್ಲಿ ಶೇ.16ರಷ್ಟು ಏರಿಕೆ ಕಂಡಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ 3,36,679 ವಾಹನಗಳು ಮಾರಾಟವಾಗಿದ್ದವು.

Advertisement

ಕಳೆದ ತಿಂಗಳು ಮಾರುತಿ ಸುಜುಕಿ ಇಂಡಿಯಾ ಹಾಗೂ ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಕಂಪನಿಯ ಕಾರುಗಳು ಗರಿಷ್ಠ ಮಾರಾಟವಾಗಿವೆ.
ಅಕ್ಟೋಬರ್‌ನಲ್ಲಿ ಮಾರುತಿ ಸುಜುಕಿ ಇಂಡಿಯಾದ 1,77,266 ಪ್ರಯಾಣಿಕ ವಾಹನಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಮಾರಾಟದಲ್ಲಿ ಶೇ.21ರಷ್ಟು ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next