Advertisement

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

02:11 PM Nov 22, 2024 | Team Udayavani |

ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಪೀತುಬೈಲ್ ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ ಕೌಂಟರ್ ಪ್ರಕರಣದ ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಶುಕ್ರವಾರ (ನ.22) ನಡೆದಿದೆ.

Advertisement

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಶುಕ್ರವಾರ ಬೆಳಗ್ಗೆ ಹೆಬ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆತನನ್ನು ವಶಪಡಿಸಿಕೊಂಡು ಹೆಬ್ರಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ಆತ ಅಮಾಯಕ ಆತನಿಗೆ ಏನು ತಿಳಿದಿಲ್ಲ ಅಂತವನನ್ನು ಯಾಕೆ ಠಾಣೆಗೆ ಕರೆದುಕೊಂಡು ಬಂದಿದ್ದೀರಿ ಅಲ್ಲಿಯ ವಿಚಾರಿಸಬಹುದಿತ್ತಲ್ಲ ಎಂದು ಮಲೆಕುಡಿಯ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಠಾಣಾಧಿಕಾರಿ ಅವರಲ್ಲಿ ಮನವಿ ಮಾಡಿ ಆತನನ್ನು ಕೂಡಲೇ ಬಿಡುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಸಿದ ಠಾಣಾಧಿಕಾರಿ ಮಹೇಶ್ ಟಿ. ಮೇಲಾಧಿಕಾರಿಗಳಲ್ಲಿ ವಿಚಾರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಆತನನ್ನು ಬಿಡುವ ತನಕ ನಾವು ಠಾಣೆಯಿಂದ ಕದಲುವುದಿಲ್ಲ ಎಂದು ಗ್ರಾಮಸ್ಥರು ಠಾಣೆ ಎದುರು ಜಮಾಸಿದ್ದಾರೆ.

Advertisement

ಸಮಾಜದ ಪ್ರಮುಖರಾದ ಶ್ರೀಧರ್ ಗೌಡ, ಗಂಗಾಧರ ಗೌಡ, ನಾಡ್ಪಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್, ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ್ ಬಂಗೇರ, ಊರಿನ ಪ್ರಮುಖರಾದ ವಿಜಯ ಶೆಟ್ಟಿ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next