Advertisement

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

02:47 AM Jan 07, 2025 | Team Udayavani |

ಚಿಕ್ಕಮಗಳೂರು: ರಾಜ್ಯ ಸರಕಾರದ ನಕ್ಸಲ್‌ ಶರಣಾಗತಿ ಪ್ಯಾಕೇಜ್‌ ಘೋಷಣೆ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ನಕ್ಸಲ್‌ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.

Advertisement

ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್‌. ಜೀಶ್‌ 2024ರ ನಕ್ಸಲ್‌ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್‌ ಮುಖಂಡ ವಿಕ್ರಮ್‌ ಗೌಡ ಎನ್‌ಕೌಂಟರ್‌ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ನಕ್ಸಲ್‌ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದರು.

ಸರಕಾರ ಕೂಡ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ನಕ್ಸಲ್‌ ಶರಣಾಗತಿ ಪ್ಯಾಕೇಜ್‌-2024 ಘೋಷಣೆ ಮಾಡಿತ್ತು. ಇವರ ಶರಣಾಗತಿಯೊಂದಿಗೆ ಜಿಲ್ಲೆಯ ಮಲೆನಾಡು ನಕ್ಸಲ್‌ ಪೀಡಿತ ಪ್ರದೇಶವೆಂಬ ಹಣೆಪಟ್ಟಿಯಿಂದ ಹೊರಬರಲಿದೆ.

ʼ6 ಮಂದಿ ನಕ್ಸಲರ ಶರಣಾಗತಿ ಸಂಬಂಧ ಸರಕಾರದಿಂದ ಯಾವುದೇ ಆದೇಶ ಬಂದಿಲ್ಲ. ಅವರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ನಡೆಯುತ್ತಿರುವುದು ನಿಜ.ʼ ಡಾ| ವಿಕ್ರಮ್‌ ಅಮಟೆ, ಎಸ್‌ಪಿ, ಚಿಕ್ಕಮಗಳೂರು

ಶರಣಾಗತಿ ಪ್ರಸ್ತಾವ ಬಂದಿಲ್ಲ: ಡಿಸಿ ಮೀನಾ
ಚಿಕ್ಕಮಗಳೂರು: ನಕ್ಸಲ್‌ ಶರಣಾಗತಿ ಸಂಬಂಧ ಯಾವುದೇ ಪ್ರಸ್ತಾವ ಜಿಲ್ಲಾಡಳಿತದ ಮುಂದೆ ಬಂದಿಲ್ಲ. ನನಗೆ ಅದರ ಬಗ್ಗೆ ಮಾಹಿತಿ ಇಲ್ಲ ಎಂದು ಜಿಲ್ಲಾ ಧಿಕಾರಿ ಸಿ.ಎನ್‌. ಮೀನಾ ನಾಗರಾಜ್‌ ಸುದ್ದಿಗಾರರಿಗೆ ತಿಳಿಸಿದರು. ಆ ರೀತಿ ಏನಾದರೂ ಇದ್ದರೆ ನಕ್ಸಲ್‌ ಶರಣಾಗತಿ ಕಮಿಟಿ ಇದ್ದು ರಾಜ್ಯ ಸರಕಾರದಿಂದ ಮಾಹಿತಿ ನೀಡಬೇಕು. ಆದರೆ ಅಂತಹ ಯಾವುದೇ ಮಾಹಿತಿ ಬಂದಿಲ್ಲ.

Advertisement

ನಕ್ಸಲ್‌ ಶರಣಾಗತಿ ಪ್ರಸ್ತಾವ ರಾಜ್ಯ ಸರಕಾರದಿಂದ ನಮ್ಮ ಮುಂದೆ ಬಂದರೆ ಕಮಿಟಿ ನಿಯಮದಂತೆ ಶರಣಾಗತಿ ಮಾಡಲಾಗುವುದು. ಅವರ ಬೇಡಿಕೆಗಳ ಬಗ್ಗೆ ರಾಜ್ಯ ಸರಕಾರ ಮತ್ತು ಕಮಿಟಿಯ ಮುಂದೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next