Advertisement

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

10:34 AM Jan 08, 2025 | Team Udayavani |

ಚಿಕ್ಕಮಗಳೂರು: ಆರು ಜನ ನಕ್ಸಲರು ಬುಧವಾರ(ಜ8) ಜಿಲ್ಲಾಡಳಿತ ಮುಂದೆ ಶರಣಾಗಿ ಸಮಾಜದ ಮುಖ್ಯವಾಹಿನಿಗೆ‌ ಬರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Advertisement

ಮುಖ್ಯವಾಹಿನಿಗೆ ಆಗಮಿಸುವ ಆರು ಜನ ನಕ್ಸಲರ ಕುಟುಂಬಸ್ಥರು ತಮ್ಮ ಕುಟುಂಬದ ಸದಸ್ಯರನ್ನು ಬರಮಾಡಿ ಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಕಮಿಟಿ ಸದಸ್ಯರಾದ ಬಿ.ಟಿ.ಲಲಿತ ನಾಯಕ್ ಸೇರಿದಂತೆ ಅನೇ
ಕರು ಸ್ಥಳದಲ್ಲಿ ಇದ್ದಾರೆ.

ಜಿಲ್ಲಾಡಳಿತ ಹಾಗೂ ಪ್ರವಾಸಿ ಮಂದಿರದ ಸುತ್ತಮುತ್ತ ಬೀಗಿ ಬಂದೋಬಸ್ತ್ ನಿಯೋಜನೆ ಯಾಗಿದ್ದು ಆರು ಜನ ನಕ್ಸಲರು ಪ್ರವಾಸಿ ಮಂದಿರಕ್ಕೆ ಮೊದಲು ಆಗಮಿಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಮುಂದೇ ಸಮಾಜದ ಮುಖ್ಯವಾಹಿನಿಗೆ ಆಗಮಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next