ಹರಿಯಾಣ: ಎರಡನೇ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಗುರುವಾರ(ಅ.17) ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪಂಚಕುಲದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸೈನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದ , ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.
ಅಕ್ಟೋಬರ್ 5 ರಂದು ನಡೆದ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 90 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿಗೆ ಅದಿಕಾರದ ಚುಕ್ಕಾಣಿ ಹಿಡಿದಂತಾಗಿದೆ.
ಇದನ್ನೂ ಓದಿ: INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್