Advertisement

 ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಸಹಕಾರಿ

04:19 PM Jun 19, 2020 | Naveen |

ನಾಯಕನಹಟ್ಟಿ: ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಸುಲಭ ವಿಧಾನವಾಗಿದೆ ಎಂದು ಪಪಂ ಮುಖ್ಯಾಧಿಕಾರಿ ಡಿ. ಭೂತಪ್ಪ ಹೇಳಿದರು.

Advertisement

ಗುರುವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಮಾಸ್ಕ್ ದಿನಾಚರಣೆ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.ಪ್ರಪಂಚವನ್ನು ಕಾಡುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು ಸುಲಭದ ಪರಿಹಾರ. ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಮಾಸ್ಕ್ ಧರಿಸುವುದರಿಂದ ಸ್ವಯಂ ರಕ್ಷಣೆ ಸಾಧ್ಯವಿದೆ. ಇದರಿಂದ ಸೋಂಕು ಇತರರಿಗೆ ಹರಡದಂತೆ ತಡೆಗಟ್ಟಬಹುದು. ಸಾರ್ವಜನಿಕರು ಮಾಸ್ಕ್ ಧರಿಸದೆ ಓಡಾಡಿದರೆ 200 ರೂ. ದಂಡ ವಿಧಿಸಲಾಗುತ್ತಿದ್ದು, ಈಗಾಗಲೇ ಎರಡು ಸಾವಿರ ರೂ. ದಂಡ ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಪಪಂ ವ್ಯಾಪ್ತಿಯಲ್ಲಿ ದಂಡ ಹಾಕುವ ಪ್ರಮಾಣ ಹೆಚ್ಚಾಗಲಿದೆ ಎಂದರು.

ಉಪ ತಹಶೀಲ್ದಾರ್‌ ಟಿ. ಜಗದೀಶ್‌ ಮಾತನಾಡಿ, ಮನೆಯಲ್ಲಿ ಬಟ್ಟೆಯಿಂದ ಮಾಸ್ಕ್ ತಯಾರಿಸಬಹುದು. ಪ್ರತಿ ಬಾರಿ ಮನೆಯಿಂದ ಹೊರಡುವಾಗ ಮಾಸ್ಕ್ಧ ರಿಸುವುದನ್ನು ಕಡ್ಡಾಯವಾಗಿ ಅಭ್ಯಾಸ ಮಾಡಬೇಕು. ಕಣ್ಣು, ಮೂಗು, ಬಾಯಿಯನ್ನು ಮುಟ್ಟುವ ಅಭ್ಯಾಸವನ್ನು ಬಿಡಬೇಕು. ಸರ್ಕಾರದ ಲಾಕ್‌ಡೌನ್‌, ಕರ್ಫ್ಯೂ ಸೇರಿದಂತೆ ಎಲ್ಲ ಕ್ರಮಗಳಿಗೆ ಸಾರ್ವಜನಿಕರು ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋವಿಡ್  ನೊಂದಿಗೆ ಬದುಕುವುದು ಅನಿವಾರ್ಯವಾಗಲಿದೆ. ಇದಕ್ಕಾಗಿ ಜನರು ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂದು ತಿಳಿಸಿದರು.

ಪಪಂನಿಂದ ತೇರು ಬೀದಿ, ಬಿಳೇಕಲ್‌ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಪೊಲೀಸ್‌, ಆರೋಗ್ಯ ಇಲಾಖೆ ಹಾಗೂ ನಾಡ ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು. ಪಿಎಸ್‌ಐ ಎಸ್‌. ರಘುಪ್ರಸಾದ್‌, ವೈದ್ಯಾಧಿ ಕಾರಿ ಡಾ| ಅಶೋಕ್‌, ಆರೋಗ್ಯ ನಿರೀಕ್ಷಕ ರುದ್ರಮುನಿ, ಗ್ರಾಮಲೆಕ್ಕಾಧಿಕಾರಿ ಉಮಾ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next