Advertisement

ಸಿಂದಗಿ ಉಪ ಚುನಾವಣೆ : ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

07:30 PM Oct 01, 2021 | Ganesh Hiremath |

ವಿಜಯಪುರ: ಸಿಂಧಗಿ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯ ಘೋಷಣೆಯಾಗಿದೆ. ನಾಜಿಯಾ ಶಕೀಲಾ ಅಂಗಡಿ ಅವರಿಗೆ ಜೆಡಿಎಸ್‍ನಿಂದ ಟಿಕೆಟ್ ಸಿಕ್ಕಿದೆ.

Advertisement

ಹಾನಗಲ್ ವಿಧಾನಸಭೆಯ ಉಪಚುನಾವಣೆಗೆ ಜಿಡಿಎಸ್ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಕ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಆಯ್ಕೆ ಮಾಡಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ಅಕ್ಟೋಬರ್ 1 ರಿಂದ ಅಧಿಸೂಚನೆ ಹೊರಡಿಸಲಾಗುತ್ತದೆ. ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 11 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಅಕ್ಟೋಬರ್ 30 ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ್ತು ಅಂದೇ ಫಲಿತಾಂಶ ಹೊರಬೀಳಲಿದೆ. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿತ್ತು. ಇನ್ನು ಎಂ.ಸಿ. ಮನಗೂಳಿ ನಿಧನದಿಂದಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next