ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶೃದ್ಧಾ ಕಪೂರ್ ವಿಚಾರಣೆ ಮಾಡಿದ್ದ ಎನ್ ಸಿಬಿ ಅಧಿಕಾರಿ ಕೆಪಿಎಸ್ ಮಲ್ಹೋತ್ರಾಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಮಾದಕ ವಸ್ತು ಸಂಪರ್ಕ ಪತ್ತೆಯಾದ ಹಿನ್ನಲೆಯಲ್ಲಿ ಎನ್ ಸಿಬಿ ತನಿಖೆ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶೃದ್ಧಾ ಕಪೂರ್ ರನ್ನು ಎನ್ ಸಿಬಿ ಕಚೇರಿಗೆ ಕರೆಸಿ ವಿಚಾರಣೆ ನಡೆಸಿತ್ತು. ಕೆಲವೇ ದಿನಗಳ ಹಿಂದೆ ತಮ್ಮನ್ನು ವಿಚಾರಣೆ ನಡೆಸಿದ್ದ ಅಧಿಕಾರಿಗೆ ಕೋವಿಡ್ ಸೋಂಕು ದೃಢವಾಗಿರುದು ನಟಿಮಣಿಯರ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಅನುಶ್ರೀ ಬೆಂಬಲಕ್ಕೆ ನಿಂತ ಮಾಜಿ ಸಿಎಂ ಯಾರೆಂಬುದು ಬಹಿರಂಗವಾಗಲಿ: ಎಚ್ಡಿಕೆ
ಸುಶಾಂತ್ ಪ್ರಕರಣದಲ್ಲಿ ಡ್ರಗ್ ನಂಟಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಎನ್‌ಸಿಬಿಯ ಐದು ಸದಸ್ಯರ ತಂಡವನ್ನು ದೆಹಲಿಯಿಂದ ಮುಂಬೈಗೆ ಕಳುಹಿಸಲಾಗಿದೆ. ಎನ್‌ಸಿಬಿಯ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಈ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ತಮ್ಮ ಮುಂಬೈ ನಿವಾಸದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಮಾದಕ ಲೋಕದ ನಂಟು ತಳುಕು ಹಾಕಿಕೊಂಡಿದೆ.