ಮುಂಬಯಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಸೋಮವಾರ ಮುಂಬಯಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪವಾರ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪವಾರ್ ಅವರು ನವೆಂಬರ್ 2 ರಂದು ಡಿಸ್ಚಾರ್ಜ್ ಆಗುವ ಸಾಧ್ಯತೆಯಿದ್ದು, ಅವರು ನವೆಂಬರ್ 4-5 ರಂದು ಶಿರ್ಡಿಯಲ್ಲಿ ನಡೆಯಲಿರುವ ಪಕ್ಷದ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್‌ಸಿಪಿ ಮೂಲಗಳು ತಿಳಿಸಿವೆ.
ಕಳೆದ ವರ್ಷ ಎಪ್ರಿಲ್‌ನಲ್ಲಿ ಎನ್‌ಸಿಪಿ ಮುಖ್ಯಸ್ಥರು ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಇದನ್ನೂ ಓದಿ:ಪ್ರಧಾನಿ ಮೋದಿ ಎಲ್ಲ ರಾಜ್ಯಗಳನ್ನು ಸಮಾನವಾಗಿ ಕಾಣಬೇಕು : ರಾಜ್ ಠಾಕ್ರೆ
ಈ ತಿಂಗಳ ಆರಂಭದಲ್ಲಿ, ಎಚ್ಕೆ ಪಾಟೀಲ್ , ಅಶೋಕ್ ಚವಾಣ್, ಬಾಳಾಸಾಹೇಬ್ ಥೋರಟ್ , ನಸೀಮ್ ಖಾನ್, ಭಾಯಿ ಜಗತಾಪ್ ಮತ್ತು ಸೂರಜ್ ಠಾಕೂರ್ ಸೇರಿದಂತೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರ ನಿಯೋಗವು ಶರದ್ ಪವಾರ್ ಅವರೊಂದಿಗೆ ಸಭೆ ನಡೆಸಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿತ್ತು. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ಆಹ್ವಾನವನ್ನು ಪವಾರ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.