Advertisement

NCP ಹೆಸರು: ಶರದ್‌ ಅರ್ಜಿಗೆ ಅಜಿತ್‌ ಬಣದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

12:07 AM Jul 30, 2024 | Team Udayavani |

ಹೊಸದಿಲ್ಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಬಣವೇ ನಿಜವಾದ ಎನ್‌ಸಿಪಿ ಎಂದು ಘೋಷಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ ರಾಹುಲ್‌ ನರ್ವೇಕರ್‌ ನಿರ್ಧಾರವನ್ನು ಪ್ರಶ್ನಿಸಿ ಶರದ್‌ ಪವಾರ್‌ ಬಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿ ಸಿದಂತೆ ಸುಪ್ರೀಂ ಕೋರ್ಟ್‌, ಅಜಿತ್‌ ಹಾಗೂ ಅವರ 40 ಶಾಸಕರಿಂದ ಪ್ರತಿಕ್ರಿಯೆ ಕೋರಿದೆ. ಸಿಜೆಐ ಡಿ.ವೈ.ಚಂದ್ರಚೂಡ್‌, ನ್ಯಾ. ಜೆ.ಬಿ.ಪದೀìವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠವು ಈ ಅರ್ಜಿ ವಿಚಾರಣೆ ನಡೆಸಿದೆ. ಶರದ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಸಿಂ Ì ರಾಜ್ಯ ವಿಧಾನ ಸಭೆಯ ಅಲ್ಪಾವಧಿಯನ್ನು ಗಮನದಲ್ಲಿಟ್ಟುಕೊಂಡು ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಕೋರಿದರು. ಈ ನವೆಂಬರ್‌ ವೇಳೆಗೆ ರಾಜ್ಯ ಸರಕಾರದ ಅವಧಿ ಮುಕ್ತಾಯಗೊಳ್ಳಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next