ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎನ್‌ಸಿಪಿ ಮುಖ್ಯಸ್ಥ ಶರದ್‌ಪವಾರ್ ರಾಜ್ಯಕ್ಕೆ ಬಂದಿದ್ದು, ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ಬೆಂಗಳೂರಿನಿಂದ ಬೆಳಗಾವಿ ವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಿರುದ್ಯೋಗ, ಬೆಲೆ ಏರಿಕೆ ವಿಚಾರ ಮುಂದಿಟ್ಟು ಪಾದಯಾತ್ರೆ ನಡೆಸ ಲಾಗುವುದು ಎಂದರು.
ರಾಜ್ಯದ ಕೆಲವೆಡೆ ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಜಾತ್ಯತೀತ ಪಕ್ಷಗಳ ಅಭ್ಯರ್ಥಿಗಳಿಗೆ ತೊಂದರೆ ಯಾಗದಂತೆ ನಾವು ಸ್ಪರ್ಧಿಸ ಲಿದ್ದೇವೆ. ದೇಶದಲ್ಲಿ ಜಾತ್ಯತೀತ ರಾಜಕೀಯ ಪಕ್ಷಗಳ ಒಕ್ಕೂಟವನ್ನು ಬಲಪಡಿಸುವ ಪ್ರಯತ್ನ ಆರಂಭವಾಗಿದೆ ಎಂದರು.
ಇದನ್ನೂ ಓದಿ:ಮುಸ್ಲಿಮರ ವರ್ತನೆ ಬದಲಾಗಲಿ: ಈಶ್ವರಪ್ಪ
ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ರಾಜಕಾರಣ ಮಾಡಲು ಸಾಧ್ಯವಿಲ್ಲ. ಎನ್‌ಸಿಪಿ ಕಾಂಗ್ರೆಸ್ ಜತೆಯಲ್ಲೇ ಹೆಜ್ಜೆ ಹಾಕಲಿದೆ ಎಂದರು.