Advertisement

ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ರಾಜ್ಯಪಾಲ ಧನಕರ್

09:33 PM Jul 16, 2022 | Team Udayavani |

ನವದೆಹಲಿ : ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರ ಹೆಸರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ.

Advertisement

ಧನಕರ್ ಅವರು 18 ಮೇ 1951 ರಂದು ರಾಜಸ್ಥಾನ ದ ಕಿತಾನ ಎಂಬ ಸಣ್ಣ ಹಳ್ಳಿಯಲ್ಲಿ ರೈತ ಕುಟುಂಬದಲ್ಲಿ ಜನಿಸಿದರು. ಅವರು ತಮ್ಮ ಶಾಲಾ ಶಿಕ್ಷಣವನ್ನು ಚಿತ್ತೋರ್‌ಗಢದ ಸೈನಿಕ ಶಾಲೆಯಲ್ಲಿ ಪೂರ್ಣಗೊಳಿಸಿದರು  ನಂತರ ಜೈಪುರದ ರಾಜಸ್ಥಾನ ವಿಶ್ವವಿದ್ಯಾಲಯದಿಂದ ಪದವಿ ಪಡೆದರು.

ಧನಕರ್ ಅವರು 9 ನೇ ಲೋಕಸಭೆಯಲ್ಲಿ 1989-91 ರ ಅವಧಿಯಲ್ಲಿ ರಾಜಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಜನತಾ ದಳವನ್ನು ಪ್ರತಿನಿಧಿಸಿ ಸಂಸದರಾಗಿದ್ದರು. 1993-98 ರ ಅವಧಿಯಲ್ಲಿ ರಾಜಸ್ಥಾನದ ಕಿಶನ್‌ಗಢ್‌ನಿಂದ ಶಾಸಕರಾಗಿದ್ದರು. ಜೈಪುರದ ರಾಜಸ್ಥಾನ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಲವಾರು ಉನ್ನತ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next