Advertisement
ಪೊಲೀಸ್ ಇಲಾಖೆಯಿಂದ ರಾಜಭವನದ ಗಾಜಿನಮನೆಯಲ್ಲಿ ಆಯೋ ಜಿಸಲಾಗಿದ್ದ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಂಥ ತರಬೇತಿ ನೀಡಲು ಪ್ರತ್ಯೇಕ ಸಂಸ್ಥೆ ಸ್ಥಾಪಿಸಬೇಕಾಗಿದೆ. ಮಧ್ಯಮ ಹಂತದ ಪೊಲೀಸರಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಮಾದರಿಯಲ್ಲಿ ತರಬೇತಿ ನೀಡುವ ವ್ಯವಸ್ಥೆ ಜಾರಿಗೆ ಬರಬೇಕಿದೆ ಎಂದು ತಿಳಿಸಿದ್ದಾರೆ.
ವಿಧಿವಿಜ್ಞಾನ ಪ್ರಯೋಗಾಲಯದ ಕೊರತೆಯಿಂದಾಗಿ ಹಲವು ಅಪರಾ ಧಿಗಳಿಗೆ ಶಿಕ್ಷೆ ವಿಧಿಸುವುದು ತಡವಾ ಗುತ್ತಿದೆ. ಹೀಗಾಗಿ ಅಪರಾಧಿಗಳ ಶೋಧನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಬೇಕಿದೆ. ಪೊಲೀಸ್ ಇಲಾಖೆಯ ಪ್ರತಿ ವಿಭಾಗಕ್ಕೆ ಎರಡು ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆಯಾಗಬೇಕು. ಅದಕ್ಕೆ ಬೇಕಾಗುವ ತಂತ್ರಜ್ಞರು, ಸಿಬಂದಿ ಯನ್ನು ಒದಗಿಸಬೇಕು. ಗೃಹ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಸಿಎಂ ಹೇಳಿದರು.
Related Articles
Advertisement
ದೇಶದಲ್ಲೇ ರಾಜ್ಯದ ಪೊಲೀಸ್ ವ್ಯವಸ್ಥೆ ದಕ್ಷ: ಆರಗಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ರಾಜ್ಯ ಪೊಲೀಸರಿಗೆ ಅತ್ಯುತ್ತಮ ವಸತಿ ಸೌಲಭ್ಯ, ಸೈಬರ್ ಅಪರಾಧ ವಿಭಾಗದ ಬಲಪಡಿಸುವುದು ಸಹಿತ ಅಪರಾಧ ನಿಯಂತ್ರಣದ ಜತೆಗೆ ಪೊಲೀಸರಿಗೆ ಕೆಲಸ ಮಾಡಲು ಉತ್ತಮ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ದೇಶದಲ್ಲಿಯೇ ರಾಜ್ಯ ಪೊಲೀಸ್ ವ್ಯವಸ್ಥೆ ದಕ್ಷವಾಗಿದೆ ಎಂದು ತಿಳಿಸಿದರು. ಪೊಲೀಸರು ತಮ್ಮ ಜೀವನದಲ್ಲಿ ರಾಜಿ ಮಾಡಿಕೊಂಡು ಸೇವೆ ಮಾಡುತ್ತಿದ್ದಾರೆ. ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ಕಾನೂನು ಕಾಪಾಡಲು, ಅಪರಾಧ ತಡೆಗೆ ಶ್ರಮಿಸುತ್ತಿದ್ದಾರೆ. ದೇಶದಲ್ಲೇ ರಾಜ್ಯ ಪೊಲೀಸ್ ಶ್ರೇಷ್ಠ ಪಡೆಯಾಗಿದೆ. ಈಗ ನಮ್ಮ ಪೊಲೀಸರ ಸೇವೆ ಗುರುತಿಸಿ ರಾಷ್ಟ್ರಪತಿ ಪದಕ ನೀಡುತ್ತಿರುವುದು ಹೆಮ್ಮೆಯ ವಿಚಾರ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ