ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,993 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 662 ದಿನಗಳಲ್ಲಿನ ಕನಿಷ್ಠದ್ದಾಗಿದೆ. ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,71,308ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಮಾರ್ಚ್ 08) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಗಂಗೂಬಾಯಿ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹಾಲಿವುಡ್ ಗೆ ಆಲಿಯಾ ಭಟ್
ಕೋವಿಡ್ ನಿಂದ 24ಗಂಟೆಯಲ್ಲಿ 108 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,15,210ಕ್ಕೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 49,948ಕ್ಕೆ ಇಳಿಕೆಯಾಗಿದೆ. ಕೋವಿಡ್ 19 ಚೇತರಿಕೆ ದರ ಶೇ.98.68ರಷ್ಟಿದೆ. 24ಗಂಟೆಯಲ್ಲಿ 4,170 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.0.46ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.068ರಷ್ಟಿದೆ. ಭಾರತದಲ್ಲಿ ಈವರೆಗೆ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,24,06,150ಕ್ಕೆ ತಲುಪಿದೆ.