Advertisement

ವನಿತಾ ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಜೆಮಿಮಾ, ಶಿಖಾ ಪಾಂಡೆಗಿಲ್ಲ ಜಾಗ!

10:37 AM Jan 06, 2022 | Team Udayavani |

ಮುಂಬೈ: ನ್ಯೂಜಿಲ್ಯಾಂಡ್ ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ವಿಶ್ವಕಪ್ ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಗುರುವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮಾರ್ಚ್ 4 ಮತ್ತು ಏಪ್ರಿಲ್ 3 ರ ನಡುವೆ ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಮಿಥಾಲಿ ರಾಜ್ ಮುನ್ನಡೆಸಲಿದ್ದು, ಹರ್ಮನ್‌ಪ್ರೀತ್ ಕೌರ್ ಉಪನಾಯಕಿಯಾಗಿರಲಿದ್ದಾರೆ.

Advertisement

ವೇಗದ ಬೌಲರ್ ಶಿಖಾ ಪಾಂಡೆ ಮತ್ತು ಇನ್-ಫಾರ್ಮ್ ಬ್ಯಾಟರ್ ಜೆಮಿಮಾ ರೋಡ್ರಿಗಸ್ ತಂಡದಿಂದ ಹೊರಬಿದ್ದಿದ್ದಾರೆ. ಆಸೀಸ್ ನಲ್ಲಿ ನಡೆದಿದ್ದ ಬಿಗ್ ಬ್ಯಾಷ್ ಲೀಗ್ ನಲ್ಲಿ ಜೆಮಿಮಾ ಉತ್ತಮ ಪ್ರದರ್ಶನ ನೀಡಿದ್ದರು. ಕರ್ನಾಟಕದ ವೇದಾ ಕೃಷ್ಣಮೂರ್ತಿ ಕೂಡಾ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಫೆಬ್ರವರಿಯಲ್ಲಿ ನ್ಯೂಜಿಲೆಂಡ್‌ ವಿರುದ್ಧ 5 ಪಂದ್ಯಗಳ ಏಕದಿನ ಸರಣಿಯನ್ನು ಸಹ ಈ ತಂಡ ಆಡಲಿದೆ.

ವಿಶ್ವಕಪ್ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್ ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್.

ಮೀಸಲು ಆಟಗಾರರು: ಎಸ್.ಮೇಘನಾ, ಏಕ್ತಾ ಬಿಶ್ತ್, ಸಿಮ್ರಾನ್ ದಿಲ್ ಬಹದ್ದೂರ್.

Advertisement

ಇದನ್ನೂ ಓದಿ:ಜೋಹಾನ್ಸ್ ಬರ್ಗ್ ಟೆಸ್ಟ್ ನಲ್ಲಿ ಜಸ್ಪ್ರೀತ್- ಜೆನ್ಸನ್ ಜಗಳ; ಓಡಿ ಬಂದ ಅಂಪೈರ್: ವಿಡಿಯೋ ನೋಡಿ

ನ್ಯೂಜಿಲೆಂಡ್‌ನಲ್ಲಿ ಏಕಮಾತ್ರ ಟಿ20 ಪಂದ್ಯವನ್ನು ಭಾರತ ತಂಡ ಆಡಲಿದೆ.

ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್, ಏಕ್ತಾ ಬಿಷ್ತ್, ಎಸ್. ಮೇಘನಾ, ಸಿಮ್ರಾನ್ ದಿಲ್ ಬಹದ್ದೂರ್.

Advertisement

Udayavani is now on Telegram. Click here to join our channel and stay updated with the latest news.

Next