Advertisement

ಮಣಿಪುರದಲ್ಲಿ ಸನ್ನಿ ಲಿಯೋನ್ ಫ್ಯಾಷನ್ ಶೋ ಸ್ಥಳದ ಬಳಿ ಗ್ರೆನೇಡ್ ಸ್ಫೋಟ!

04:03 PM Feb 04, 2023 | Team Udayavani |

ಇಂಫಾಲ: ನಟಿ ಸನ್ನಿ ಲಿಯೋನ್ ನಾಳೆ (ಭಾನುವಾರ) ಪಾಲ್ಗೊಳ್ಳಬೇಕಾಗಿದ್ದ ಫ್ಯಾಷನ್ ಶೋ ಕಾರ್ಯಕ್ರಮದ ಸ್ಥಳದ ಬಳಿ ಶನಿವಾರ ಪ್ರಬಲ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಮಣಿಪುರದ ರಾಜಧಾನಿಯ ಹಟ್ಟಾ ಕಾಂಗ್ಜೆಬುಂಗ್ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಯಾವುದೇ ವ್ಯಕ್ತಿಗಳಿಗೆ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಶನಿವಾರ ಬೆಳಗ್ಗೆ 6.30ರ ಸುಮಾರಿಗೆ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸುಧಾರಿತ ಸ್ಫೋಟಕ ಸಾಧನ ಅಥವಾ ಗ್ರೆನೇಡ್‌ನಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಈ ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next