Advertisement
ಹೈದರಾಬಾದ್ ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಒವೈಸಿ, ಬಿಹಾರ ಸೀಮಾಂಚಲ್ ಪ್ರದೇಶದ ನ್ಯಾಯಕ್ಕಾಗಿ ನಮ್ಮ ಪಕ್ಷ ಹೋರಾಟ ನಡೆಸಲಿದೆ ಎಂದು ಹೇಳಿದರು.
Related Articles
Advertisement
ದೇಶದ ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ನಾನು ಯಾರದ್ದಾದರು ಅನುಮತಿ ಪಡೆಯಬೇಕಾದ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು. ಎಐಎಂಐಎಂ ಪಕ್ಷ ದೇಶದ ಇತರ ರಾಜ್ಯಗಳಲ್ಲಿಯೂ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಎಐಎಂಐಎಂ 2022ರಲ್ಲಿ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಲಿದೆ. ನಾವು ಯಾರ ಜತೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂಬುದು ಸಮಯ ಮಾತ್ರ ನಿರ್ಧರಿಸಲಿದೆ ಎಂದು ಒವೈಸಿ ಹೇಳಿದರು.
ಬಿಹಾರ ಚುನಾವಣೆಯಲ್ಲಿ ಎಐಎಂಐಎಂ ಮತ ವಿಭಜನೆಗೆ ಕಾರಣವಾಗಿದೆ ಎಂಬ ಪಶ್ಚಿಮಬಂಗಾಳದ ಅಧೀರ್ ರಂಜನ್ ಚೌಧುರಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಒವೈಸಿ, ಚೌಧುರಿ ತಮ್ಮ ಕ್ಷೇತ್ರದಲ್ಲಿ ಮುಸ್ಲಿಮರ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಹೇಳಿದರು. ಅವರು ಮುಸ್ಲಿಮರಿಗಾಗಿ ಏನು ಮಾಡಿದ್ದಾರೆ ಎಂಬುದು ತೋರಿಸಲಿ ಎಂದು ಸವಾಲು ಹಾಕಿದರು.