Advertisement

ಕಾನೂನು-ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ: ಪೊಲೀಸರಿಗೆ ಸಿಎಂ ಸೂಚನೆ

10:00 AM Dec 20, 2019 | sudhir |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯದಲ್ಲೂ ಪ್ರತಿರೋಧ ವ್ಯಕ್ತವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ಜಾರಿ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಗುರುವಾರ ಚರ್ಚೆ ನಡೆಸಿದರು.

Advertisement

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿ ಎನ್‌. ರಾಜು ಅವರು ಗುರುವಾರ ಮುಖ್ಯಮಂತ್ರಿಗಳ ಡಾಲರ್ ಕಾಲನಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದರು. ಗುಪ್ತಚರ ಇಲಾಖೆ ಎಡಿಜಿಪಿ ಕಮಲ್‌ಪಂಥ್‌, ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರೊಂದಿಗೂ ಅವರು ಚರ್ಚೆ ನಡೆಸಿದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ಕಟ್ಟೆಚ್ಚರ ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು. ಪ್ರತಿಭಟನೆ ನಡೆಯುವ ಸ್ಥಳಗಳಲ್ಲಿ ಸೂಕ್ತ ಭದ್ರತೆ ಕಲ್ಪಿಸಬೇಕು. ಪ್ರತಿಭಟನೆ ಹೆಸರಿನಲ್ಲಿ ಶಾಂತಿ ಕದಡುವವರ ಬಗ್ಗೆ ಎಚ್ಚರ ವಹಿಸಿ ಮುಲಾಜಿಲ್ಲದೆ ಕ್ರಮ ಜರಗಿಸಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next