ಹಾಸನ: ಕೋವಿಡ್ ಲಸಿಕೆ ಶೀಘ್ರದಲ್ಲೇ ಬರಲಿರುವ ಸೂಚನೆಗಳಿದ್ದು, ಜಿಲ್ಲೆಗೆಪೂರೈಕೆ ಆರಂಭವಾದಾಗ ಶೇಖರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಲಸಿಕೆ ಶೇಖರಣೆಗೆ ಸೂಕ್ತರೀತಿಯಲ್ಲಿ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಬೇಕು, ಕೇಂದ್ರ ಸರ್ಕಾರದ ಆದೇಶದಂತೆ ಮೊದಲನೇ ಹಂತದಲ್ಲಿ ಲಸಿಕೆಯನ್ನು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗೆ ನೀಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣ ಕಡಿಮೆ ಮಾಡಲು ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ವಿಟಮಿನ್ ಮಾತ್ರೆಗಳ ವಿತರಣೆ ಸೇರಿ ಸಾರ್ವಜನಿಕರು ಸ್ವಯಂಪ್ರೇರಿತ ರಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಾಗೃತಿ ಹಾಗೂ ಪ್ರೇರಣೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪರೀಕ್ಷೆ ಕಡ್ಡಾಯ: ಸರ್ಕಾರಿ ನೌಕರರು ಹೆಚ್ಚಾಗಿ ಸಾರ್ವಜನಿಕರ ಸಂಪರ್ಕಕ್ಕೆ ಬರುವುದರಿಂದ ತಿಂಗಳಿಗೆ ಎರಡು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೃಷಿ ಮಾರು ಕಟ್ಟೆಯ ವರ್ತಕರೂ 15 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್‌ಅಧಿಕಾರಿ ಹಾಗೂ ಕೊರೊನಾ ವ್ಯಾಕ್ಸಿನ್ ಜಿಲ್ಲಾ ನೋಡಲ್ ಅಧಿಕಾರಿ ಕಾಂತರಾಜು ಮಾತನಾಡಿ, ಜಿಲ್ಲೆಯಲ್ಲಿ ಪೋಲಿಯೋ ಸೇರಿದಂತೆ ಇತರೆ ವ್ಯಾಕ್ಸಿನೇಷನ್‌ಗಳ ವರದಿ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಆಯಾ ತಾಲೂಕಿನ ಆರೋಗ್ಯ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಗಮನಹರಿಸಿ ಚುಚ್ಚು ಮದ್ದು ಕುರಿತಾಗಿ ಸೂಕ್ತ ವರದಿ ನೀಡಲು ಆದೇಶಿಸುವಂತೆ ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿಮ್ಸ್‌ನ ಶಿಶುವೈದ್ಯ ವಿಭಾಗದ ಮುಖ್ಯÓ§ ಡಾ. ಪ್ರಸನ್ನಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ, ಮತ್ತಿತರರು ಸಭೆಯಲ್ಲಿ ಹಾಜರಿದ್ದರು.