Advertisement

ಉತ್ತರ ಕರ್ನಾಟದ ನೆರೆ ಸಂತೃಸ್ಥರಿಗೆ ಅಗತ್ಯ ನೆರವು: ಪ್ರಧಾನಿ ಮೋದಿ ಭರವಸೆ

12:57 PM Oct 19, 2020 | keerthan |

ಮೈಸೂರು: ಕಳೆದೊಂದು ವಾರದಿಂದ ಭಾರಿ ಮಳೆ ಹಾಗೂ ಪ್ರವಾಹದ ಹೊಡೆತಕ್ಕೆ ಸಿಲುಕಿ ಕಂಗಲಾಗಿರುವ ಉತ್ತರ ಕರ್ನಾಟದ ನೆರೆ ಸಂತೃಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಗತ್ಯ ನೆರವು ನೀಡುವ ಭರವಸೆಯನ್ನು ನೀಡಿದರು.

Advertisement

ಸೋಮವಾರ ಮೈಸೂರು ವಿಶ್ವವಿದ್ಯಾಲಯದ ನೂರನೇ ಘಟಿಕೋತ್ಸವದಲ್ಲಿ ವರ್ಚವಲ್ ಲೈವ್ ಮೂಲಕ ಘಟಿಕೋತ್ಸವ ಭಾಷಣ ಮಾಡಿದ ಅವರು, ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಮಹೋತ್ಸವದ ಶುಭಾಶಯಗಳನ್ನು ಕನ್ನಡದಲ್ಲಿಯೇ ಜನರಿಗೆ ತಿಳಿಸಿದರು. ಮಹಾಮಾರಿ ಕೋವಿಡ್ ನಡುವೆ ದಸರಾ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದೇವು, ಆದರೆ ಮಳೆ ಮತ್ತು ಪ್ರವಾಹ ದಸರಾ ಸಂಭ್ರಮವನ್ನು ಕಸಿದುಕೊಂಡಿದೆ. ಉತ್ತರ ಕರ್ನಾಟದ ಮಳೆ ಸಂತ್ರಸ್ತರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಲ್ಲಲಿದೆ. ಸಂತ್ರಸ್ತರಿಗೆ ಅಗತ್ಯವಾದ ನೆರವನ್ನು ನೀಡಲಿದೆ ಎಂದು ಭರವಸೆ ನೀಡಿದರು.

ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯರ ಸಂಕಲ್ಪ ಹಾಗೂ ದೂರದೃಷ್ಠಿಯಿಂದ ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪನೆಗೊಂಡಿದೆ. ರಾಷ್ಟ್ರಕವಿ ಕುವೆಂಪು ಅವರು ಮಾನಸ ಗಂಗೋತ್ರಿಯಲ್ಲಿ ಯುವಕರಿಗೆ ಪ್ರೇರಣೆಯಾಗಿದ್ದರು. ಈ ಮೈಸೂರು ವಿವಿಯಲ್ಲಿ ಶಿಕ್ಷಣ ಪಡೆದಂತಹ ಅನೇಕ ಮಹನೀಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿದ್ದಾರೆ. ಮೈಸೂರು ಶಿಕ್ಷಣದ ಸ್ಥಳವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ನೈಋತ್ಯ ರೈಲ್ವೆ : ಮುಂದಿನ ನಾಲ್ಕು ವರ್ಷದಲ್ಲಿ ಎಲ್ಲಾ ಮಾರ್ಗದಲ್ಲಿ ವಿದ್ಯುತ್‌ ರೈಲು!

ಪ್ರಾಚೀನ ಕಾಲದಿಂದಲೂ ಇಲ್ಲಿ ಪಾರಂಪರಿಕವಾದ, ನಮ್ಮ ಸಂಸ್ಕೃತಿಯ ಶಿಕ್ಷಣವನ್ನು ನೀಡಲಾಗುತ್ತಿತ್ತು. ಈಗ ನಮ್ಮ ದೇಶದ ಯುವಕರಿಗೆ ಕೌಶಲ್ಯ ಆಧಾರಿತ ಶಿಕ್ಷಣವನ್ನು ನೀಡಲಾಗುತ್ತಿದೆ. ಜಾಗತಿಕ ಸ್ಪರ್ಧೆಗೆ ನಮ್ಮ ದೇಶದ ಯುವಕರನ್ನು ಸಜ್ಜುಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕಳೆದ ಐದು ವರ್ಷಗಳಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಜಾಗತಿಕ ಅವಶ್ಯಕತೆಗೆ ತಕ್ಕಂತೆ ನಮ್ಮ ದೇಶದ ಶಿಕ್ಷಣ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದ್ದು, ಆ ಮೂಲಕ ದೇಶದ ಯುವಕರಿಗೆ ಜಾಗತಿಕ ಮಟ್ಟದ ಉನ್ನತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next