Advertisement

ನಿರಾತಂಕವಾಗಿ ಟಿಇಟಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ

07:53 PM Oct 02, 2020 | Suhan S |

ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ ಅಕ್ಟೋಬರ್‌ 4ರಂದು ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರಿ ಪ್ರಾಥಮಿಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ನಿರಾತಂಕವಾಗಿ ನಡೆಯುವಂತಾಗಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಹೇಳಿದರು.

Advertisement

ಗುರುವಾರ ಜಿಲ್ಲಾಡಳಿತದ ಸಭಾಂಗಣದಲ್ಲಿ ಈ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 9.30ರಿಂದ 12ರವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ 2198 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2ರಿಂದ 4.30ರವರೆಗೆ ನಡೆಯುವ ದ್ವಿತೀಯ ಅಧಿವೇಶನದಲ್ಲಿ 5696 ಅಭ್ಯರ್ಥಿಗಳು ಸೇರಿದಂತೆ ಒಟ್ಟು 7894 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು.

ಪರೀಕ್ಷಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲು ಉದ್ದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳು ಜನಸಂದಣಿಯಿಂದ ಕೂಡಿರದಂತೆ ನೋಡಿಕೊಳ್ಳಲು ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗುವುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊರೊನಾದ ಗುಣಲಕ್ಷಣಗಳು ಕಂಡುಬಂದಲ್ಲಿ ಅಥವಾ ಕಂಟೈನ್ಮೆಂಟ್‌ ವಲಯದಿಂದ ಬರುವ ವಿದ್ಯಾರ್ಥಿಗಳಿಗಾಗಿ ಪರೀಕ್ಷಾಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪಿಸಲಾಗುವುದು ಎಂದರು. ಪರೀಕ್ಷಾರ್ಥಿಗಳು ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು

ಕಡ್ಡಾಯವಾಗಿ ಅನುಸರಿಸಬೇಕು. ಮಾಸ್ಕ್ ಹಾಗೂ ಸ್ಯಾನಿಟೈಜರ್‌ ಬಳಕೆ ಹಾಗೂ ಸಾಮಾಜಿಕ ಅಂತರಕಾಯ್ದುಕೊಳ್ಳುವ ಅಗತ್ಯವಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ಮಾರ್ಗದರ್ಶನ ನೀಡಲು ಅನುಕೂಲವಾಗುವಂತೆ ಧ್ವನಿವರ್ಧಕ ಬಳಸುವಂತೆ ಸೂಚಿಸಲಾಗಿದೆ ಎಂದರು.

ಪರೀಕ್ಷೆಗಳು ನಿರಾಂತಕವಾಗಿ, ಪಾರದರ್ಶಕವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷಾ ರ್ಥಿಗಳಲ್ಲದೆ ಇತರರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿದ್ದಾರೆ. ಅಲ್ಲದೇ ಈ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿ ಸಲಾಗಿದೆ ಎಂದವರು ತಿಳಿಸಿದರು.

Advertisement

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್‌.ಎಂ. ರಮೇಶ್‌, ಜಿಲ್ಲಾ ಖಜಾನಾಧಿಕಾರಿ ಎಚ್‌.ಎಸ್‌. ಸಾವಿತ್ರಿ, ಡಯಟ್‌ ಪ್ರಾಂಶುಪಾಲರಾದ ಶ್ರೀಮತಿ ಸುಮಂಗಳ ಕುಚಿನಾಡ ಸೇರಿದಂತೆ ಪರೀಕ್ಷಾ ಕೇಂದ್ರಗಳ ನೋಡಲ್‌ ಅಧಿಕಾರಿಗಳು, ನಿಯೋಜಿತ ಅಧಿಕಾರಿ-ಸಿಬ್ಬಂದಿ, ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next