Advertisement

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ ಬಸವರಾಜ ಬೊಮ್ಮಾಯಿ

01:10 PM Aug 06, 2021 | Team Udayavani |

ಬೆಂಗಳೂರು: ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದಲ್ಲದೆ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.

Advertisement

ಅವರು ಇಂದು ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠವು ಏರ್ಪಡಿಸಿದ್ದ “ಕರ್ನಾಟಕದಲ್ಲಿ ಮಿತಾಕ್ಷರ, ವಚನ ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು- ಒಂದು ಪರಿಶೋಧನೆ” ಎಂಬ ವಿಷಯದ ಕುರಿತ ವೆಬಿನಾರ್ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದ ವಚನ, ದಾಸ ಸಾಹಿತ್ಯ ಹಾಗೂ ಜಾನಪದ ಸಾಹಿತ್ಯಗಳು ಸಮಾನತೆ, ಸಹಿಷ್ಣುತೆ, ಧನ್ಯತೆ, ಕ್ಷಮಾಗುಣ ಮೊದಲಾದ ಭಾವಗಳನ್ನು ಸಮರ್ಥವಾಗಿ ಅಭಿವ್ಯಕ್ತಪಡಿಸಿವೆ, ಈ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವ ನಿಟ್ಟಿನಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ ಕಾರ್ಯನಿರ್ವಹಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ:‌ಸಚಿವ ಸ್ಥಾನ ಸಿಗದ್ದಕ್ಕೆ ಬೇಸರವಿದೆ,ಸಹಿಸಿಕೊಳ್ಳುವೆ: ಅರವಿಂದ ಬೆಲ್ಲದ

ಸಮಾಜದಲ್ಲಿನ ಬದಲಾವಣೆಗಳೊಂದಿಗೆ ಕಾನೂನಿನಲ್ಲಿಯೂ ಪರಿವರ್ತನೆಗಳಾಗಿವೆ. ಇಂದಿನ ದಿನಗಳಲ್ಲಿ ಸಾಮಾಜಿಕ ಸ್ಥಿತಿಗತಿಗಳಲ್ಲಿ, ವ್ಯಕ್ತಿ-ವ್ಯಕ್ತಿಯ ಸಂಬಂಧದಲ್ಲಿ, ಸಮಾಜ- ಸಮಾಜದ ಸಂಬಂಧದಲ್ಲಿ ಅಗಾಧ ಬದಲಾವಣೆಗಳಾಗುತ್ತಿದೆ. ಅಂತೆಯೇ ಕಾನೂನಿನ ಕುರಿತ ಜನತೆಯ ಚಿಂತನೆಯಲ್ಲಿಯೂ ಬದಲಾವಣೆಗಳಾಗುತ್ತಿದೆ. ಈ ಅಂಶಗಳ ಕುರಿತು ಅಧ್ಯಯನ ಪೀಠ ಅಧ್ಯಯನ ನಡೆಸಬೇಕು ಎಂದು ಹೇಳಿದರು.

Advertisement

ಕರ್ನಾಟಕದ ಸಾಹಿತ್ಯ ಕ್ಷೇತ್ರದ ಕ್ರಾಂತಿ ಗಮನಾರ್ಹವಾದುದು. ನಮ್ಮ ದೇಶದ ಕಾನೂನಿಗೆ ಆಧಾರವಾದ ಸಂವಿಧಾನದ ಆಶಯಗಳು ಬಸವಣ್ಣನವರ ಚಿಂತನೆಗಳನ್ನೇ ಬಿಂಬಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಸಕ್ತಿ ವಹಿಸಿ ಸ್ಥಾಪಿಸಿದ ಈ ಅಧ್ಯಯನ ಪೀಠವು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತಾಗಲಿ ಎಂದು ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next