ಬೇಲೂರು: ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಬಗ್ಗೆ ಪ್ರ ತಿಯೊಬ್ಬರಿಗೂ ಜಾಗೃತಿ ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ತೋಫಿಕ್ ತಿಳಿಸಿದರು. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಜನರಲ್ಲಿ ಪಲ್ಸ್ ಪೋಲಿಯೋ ಬಗ್ಗೆ ಅರಿವು ಮೂಡಿಸಬೇಕು ಪ್ರತಿ ಮಗುವು ಅಂಗವಿಕಲತೆಯಿಂದ ದೂರವಿರಲು ಆರೋಗ್ಯ ಇಲಾಖೆ ಗಮನಹರಿಸಿ ಯಾವ ಮಗು ಸಹ ಪಲ್ಸ್ ಪೋಲಿಯೋ ಹನಿಯಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದರು.
ರೋಟರಿ ಸಂಸ್ಥೆ ಅಧ್ಯಕ್ಷ ಸಂದೇಶ್ ಮಾತನಾಡಿ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿ ಸಂಸ್ಥೆ ಪಲ್ಸ್ ಪೋಲಿಯೋ ಹಾಕಿಸುವಲ್ಲಿ ಮುಂಚೂಣಿಯಲ್ಲಿ ಕೆಲಸ ನಿರ್ವಹಿಸುತ್ತಿದೆ ಭಾರತದಲ್ಲಿ 2011 ರಿಂದ ಈಚೆಗೆ ಯಾವುದೆ ಮಗುವಿಗೆ ತೊಂದರೆಯಾಗಿಲ್ಲ ರೋಟರಿ ಸಂಸ್ಥೆ 30 ವರ್ಷದಿಂದ ಇಂತಹ ಮಾಹನ್ ಕಾರ್ಯದಲ್ಲಿ ತೊಡಗಿದೆ ಎಂದು ತಿಳಿಸಿದರು.
ನೆರೆಯ ದೇಶಗಳಾದ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ನೈಜಿರೀಯಾ ದೇಶಗಳ ಮಕ್ಕಳಲ್ಲಿ ಇನ್ನು ಕಾಯಿಲೆ ಕಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ಮುಂದಿನ ದಿನಗಳಲ್ಲಿ ಸಂಪೂರ್ಣ ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್ ಮಾತನಾಡಿ, ಈ ಸಾಲಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಒಂದೇ ಹಂತದಲ್ಲಿ ನಡೆಯಲಿದೆ ಎಂದರು.
ತಾಲೂಕಿನಲ್ಲಿ 5 ವರ್ಷ ದೊಳಗಿನ 13,497 ಮಕ್ಕಳಿಗೆ 94 ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಹನಿ ಹಾಕುತ್ತಿದ್ದು ಇದಕ್ಕಾಗಿ 384 ಸಿಬಂದಿ ನೇಮಿಸಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ 3 ದಿನ ನಗರ ಪ್ರದೇಶದಲ್ಲಿ 4 ದಿನ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಭಾರತಿ, ತಾಲೂಕು ಪಂಚಾಯಿತಿ ಸದಸ್ಯೆ ಕಮಲಾ, ಆರೋಗ್ಯ ರಕ್ಷ ಸಮಿತಿ ಸದಸ್ಯರಾದ ರೀಜ್ವಾನ್, ಬಸವರಾಜು, ಜಯಶ್ರೀ, ವೈದ್ಯರಾದ ಡಾ. ಹೇಮಲತಾ, ಡಾ. ನರಸೇಗೌಡ, ಡಾ. ಸುಧಾ ಇತರರು ಇದ್ದರು.