Advertisement

ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ

02:41 PM Feb 17, 2021 | Team Udayavani |

ಮಂಡ್ಯ: ಇಡೀ ವರ್ಷದಲ್ಲಿ ರಸ್ತೆ ಅಪಘಾತಗಳು ಕನಿಷ್ಠ ಶೇ.10ರಷ್ಟು ಕಡಿಮೆಯಾಗಬೇಕು. ಇದರ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಅರಿವು ಮೂಡಿಸುವ ಮುಖ್ಯ. ಈ ಉದ್ದೇಶದಿಂದ ಪ್ರತಿವರ್ಷ ರಸ್ತೆ ಸುರಕ್ಷತಾ ಮಾಸವನ್ನು ಆಚರಿಸುತ್ತೇವೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಟಿ.ಎಸ್‌.ಪುರುಷೋತ್ತಮ್‌ ಹೇಳಿದರು.

Advertisement

ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಪರಿಸರ ರೂರಲ್‌ ಡೆವಲಪ್‌ಮೆಂಟ್‌ ಸೊಸೈಟಿ (ರಿ)ಮಂಗಲ ವತಿಯಿಂದ 32ನೇ ರಸ್ತೆ ಸುರಕ್ಷತಾ ಮಾಸ-2021ರ ನಿಮಿತ್ತ ನಡೆದ ಬೃಹತ್‌ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಮಾಸದ ನಿಮಿತ್ತ ‌ಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ರಸ್ತೆ ಅಪಘಾತವಾದ ಸಂದರ್ಭದಲ್ಲಿ ರಕ್ತ ಬಹಳ ಮುಖ್ಯವಾಗಿದೆ. ಗಾಯಾಳುವನ್ನು ಒಂದು ಗಂಟೆಯೊಳಗಾಗಿ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಬೇಕು ಎಂಬುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ರೆಡ್‌ ಕ್ರಾಸ್‌ ಸಂಸ್ಥೆಯ ಸದಸ್ಯ ಕೆ.ಟಿ.ಹನುಮಂತು ಮಾತನಾಡಿ, ರಕ್ತದಾನಕ್ಕಿಂತ ಮಿಗಿಲಾದ ಮತ್ತೂಂದು ದಾನವಿಲ್ಲ. ಒಬ್ಬ ವ್ಯಕ್ತಿ ನೀಡುವ ರಕ್ತದಲ್ಲಿ ಮೂರು ಜನರ ಪ್ರಾಣ ಉಳಿಸಬಹುದು.

ಹಾಗಾಗಿ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಹೇಳಿದರು. ಪಟ್ಟಣ ಪ್ರದೇಶಗಳ ಜನರಲ್ಲಿ ಜಾಗೃತಿಯಿದ್ದು, ಅವರು ತಾವಾಗಿ ರಕ್ತದಾನ ಮಾಡುತ್ತಾರೆ. ಆದರೆ, ಗ್ರಾಮೀಣ ಭಾಗದ ಜನರಲ್ಲಿ ರಕ್ತದಾನದ ಬಗ್ಗೆ ಅರಿವಿಲ್ಲ. ಅವರಲ್ಲಿ ಅರಿವು ಮೂಡಿಸುವ ರಕ್ತದಾನದ ಮಹತ್ವ ತಿಳಿಸಬೇಕು. ರಕ್ತದಾನ ಮಾಡುವುದರಿಂದ ಹೃದಯಾಘಾತ ಶೇ.80ರಷ್ಟು ಕಡಿಮೆಯಾಗುತ್ತದೆ ಎಂದು ಹೇಳಿದರು.

Advertisement

ಜೀವ ರಕ್ಷಣೆಗೆ ರಕ್ತದಾನ ಪೂರಕ: ಪರಿಸರ ಸಂಸ್ಥೆ ಅಧ್ಯಕ್ಷೆ ಮಂಗಲಯೋಗೇಶ್‌ ಮಾತನಾಡಿ, ರಸ್ತೆ ನಿಯಮ ಪಾಲಿಸದೆ ದೇಶದಲ್ಲಿ ಪ್ರತಿ ಗಂಟೆಗೆ ಸರಾಸರಿ 55 ಅಪಘಾತಗಳು ನಡೆದು, 17ಮಂದಿ ಸಾವಿಗೀಡಾಗುತ್ತಿದ್ದಾರೆ. ಇಂತಹ ಅವಘಡಗಳಿಂದ ಜೀವ ರಕ್ಷಿಸಲು ರಕ್ತದಾನವೂ ಪೂರಕ ನೆರವಾಗುತ್ತದೆ ಎಂದು ತಿಳಿಸಿದರು.

ಆರ್‌ಟಿಒ, ಸಂಚಾರ ಪೊಲೀಸ್‌ ಇಲಾಖೆಯ ಮಾರ್ಗಸೂಚಿಗಳು, ರಸ್ತೆ ಸುರಕ್ಷತಾ ಸಮಿತಿಯ ಸಲಹೆಗಳನ್ನು ವಾಹನ ಚಾಲಕರು ಮತ್ತು ಮಾಲೀಕರು ಜಾಗೃತಿಯಿಂದ ಪಾಲಿಸಿದರೆ ಅಪಘಾತಗಳು ಕಡಿಮೆಯಾಗುತ್ತವೆ ಎಂದು ಹೇಳಿದರು.

ರೆಡ್‌ ಕ್ರಾಸ್‌ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಮಿಮ್ಸ್‌ನ ರಕ್ತನಿಧಿ ಕೇಂದ್ರದ ರಫೀಕ್‌, ಶಿವಲಿಂಗಯ್ಯ, ರಾಜಣ್ಣ ಸೇರಿದಂತೆ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next