Advertisement

ಶೋಷಿತರ ಪರ ದನಿ ಅಗತ್ಯ: ರೈ

09:46 AM Dec 07, 2017 | |

ಮಹಾನಗರ: ದಲಿತರ ನೋವು ಅವರಿಗೆ ಮಾತ್ರ ಗೊತ್ತು. ಸಮಾಜದಲ್ಲಿ ತುಳಿತಕ್ಕೊಳಗಾದವರ ವಿರುದ್ಧ ದನಿ ಎತ್ತುವ
ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

Advertisement

ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ಪ್ರಯುಕ್ತ ಬುಧವಾರ ನಗರದ ಪುರಭವನದ ಮುಂಭಾಗದಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡುವಲ್ಲಿ ಡಾ| ಅಂಬೇಡ್ಕರ್‌ ಅವರ ಕೊಡುಗೆ ಅಪಾರ. ಸಾಮಾಜಿಕ ವ್ಯವಸ್ಥೆಯನ್ನು ಹಿಂದಿರುಗಿ ನೋಡಿದಾಗ ನೂರಾರು ವರ್ಷಗಳ ಹಿಂದೆ ಸಾಮಾಜಿಕ ವ್ಯವಸ್ಥೆ ಹೇಗಿತ್ತು ಎಂಬುದರ ಬಗ್ಗೆ ನಾವು ವಿಮರ್ಶೆ ಮಾಡುತ್ತಿಲ್ಲ. ಅಲ್ಲದೆ, ತುಳಿತಕ್ಕೊಳಗಾದವರನ್ನು ಅರ್ಥಮಾಡುತ್ತಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್‌ಗೆ ಯುವ ನೇತಾರ
ರಾಹುಲ್‌ ಗಾಂಧಿ ಅವರನ್ನು ಕಾಗ್ರೆಸ್‌ ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಕಾಂಗ್ರೆಸ್‌ ನೇತೃತ್ವ ಯುವಕರಿಗೆ ಸಿಕ್ಕಿದ್ದು, ಮುಂದಿನ ಭಾರತ ಯುವಕ ರದ್ದಾಗಿರಲಿದೆ. ರಾಹುಲ್‌ ಆಯ್ಕೆಯನ್ನು ಸ್ವಾಗತಿಸೋಣ ಎಂದು ಹೇಳಿದರು.

ಧರ್ಮದ ಹೆಸರಲ್ಲಿ ಹಿಂಸಾಚಾರ
ಬಿಜೆಪಿ ನಾಯಕರು ದೇವರ ಧರ್ಮದ ಹೆಸರಿನಲ್ಲಿ ಹಿಂಸಾಚಾರ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಹಿಂಸಾಚಾರ ಸಹಿಸಲ್ಲ ಎಂದು ಹೇಳುತ್ತಿದ್ದರೂ, ಅವರದೇ ಪಕ್ಷದ ನಾಯಕರು ಇದಕ್ಕೆ ಬೆಲೆ ಕೊಡುತ್ತಿಲ್ಲ. ಹುಣಸೂರಿನಲ್ಲಿ ನಡೆದ ಹನುಮಜಯಂತಿ ಮೆರವಣಿಗೆ ಸಮಯದಲ್ಲಿ ಸಂಸದ ಪ್ರತಾಪ್‌ ಸಿಂಹ ಅವರು ಸರಕಾರಿ ಕಾರಿನ ಅಧಿಕೃತ ಚಾಲಕನನ್ನು ಬಿಟ್ಟು ತಾನೇ ಚಾಲನೆ ಮಾಡಿ ಹಾಕಲಾಗಿದ್ದ ಬ್ಯಾರಿಕೇಡ್‌ ದ್ವಂಸ ಮಾಡಿದ್ದು ಅಫರಾಧ ಎಂದು ಹೇಳಿದರು.

Advertisement

ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಅಪರ ಜಿಲ್ಲಾಧಿಕಾರಿ ಕುಮಾರ್‌, ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ, ಪೊಲೀಸ್‌ ಕಮಿಷನರ್‌ ಪಿ.ಆರ್‌. ಸುರೇಶ್‌ ಸಹಿತ ಗಣ್ಯರು ಭಾಗವಹಿಸಿದ್ದರು.

ಖಂಡನೆ
ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದು, ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ಜರಗಲಿರುವುದಾಗಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದರು. ನಾನು 10 ಗಂಟೆಗೆ ಕಾರ್ಯಕ್ರಮಕ್ಕೆ ಆಗಮಿಸಿದಾಗ, ಅಧಿಕಾರಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕಾರ್ಯಕ್ರಮವನ್ನು ಮುಗಿಸಿದ್ದು, ಇದನ್ನು ನಾನು ಖಂಡಿಸುತ್ತೇನೆ ಎಂದು ಜಿ. ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ತಿಳಿಸಿರುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next