Advertisement

ಕೃಷಿ ಕ್ಷೇತ್ರ ಪ್ರಗತಿಗೆ ಆವಿಷ್ಕಾರ ಅಗತ್ಯ: ಡಾ|ಅಯ್ಯಪ್ಪನ್‌

11:35 AM Jul 22, 2017 | |

ರಾಯಚೂರು: ಕೃಷಿ ವಿಜ್ಞಾನಕ್ಕೆ ವಿಶೇಷ ಸ್ಥಾನಮಾನವಿದೆ. ಕೃಷಿ ಕ್ಷೇತ್ರದ ಪ್ರಗತಿಗೆ ನೂತನ ಅವಿಷ್ಕಾರಗಳು ಸಹಕಾರಿ. ವಿಜ್ಞಾನ
ಹಾಗೂ ತಂತ್ರಜ್ಞಾನ ಬೆಳವಣಿಗೆಯಿಂದ ಸಂಶೋಧನೆಗೂ ಅನುಕೂಲ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್‌ ನಿವೃತ್ತ ಮಹಾನಿರ್ದೇಶಕ ಡಾ| ಎಸ್‌. ಅಯ್ಯಪ್ಪನ್‌ ಹೇಳಿದರು.

Advertisement

ನಗರದ ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ವಿಷಯದಡಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ವಿಜ್ಞಾನಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ತಂತ್ರಜ್ಞಾನ ಆವಿಷ್ಕಾರಕ್ಕೆ ವಿಜ್ಞಾನಿಗಳು ಶ್ರಮಿಸಬೇಕು. ವೈಜ್ಞಾನಿಕ ಸಂಶೋಧನೆಗಳಿಗೆ ಕೃಷಿ ವಿಜ್ಞಾನಕ್ಕೆ ಮೂಲವಾಗಿದೆ ಎಂದು ಅಭಿಪ್ರಾಯಪಟ್ಟರು.

ವೈಜ್ಞಾನಿಕ ಸಂಶೋಧನೆಗೆ ಮುಂದಾಗಿರುವ ಯುವಕರು ಗ್ರಾಮೀಣ ಪ್ರದೇಶಗಳತ್ತ ಸಾಗಿ ವಿಜ್ಞಾನ ಹಾಗೂ ತಂತ್ರಜ್ಞಾನದ ಬಗ್ಗೆ ಮಾಹಿತಿಯೊಂದಿಗೆ ಪ್ರಯೋಗ ನಡೆಸುತ್ತಿರುವುದು ಉತ್ತಮ ಬೆಳವಣಿಗೆ. ಗ್ರಾಮೀಣ ಪ್ರದೇಶಗಳ ಪ್ರಕೃತಿ ಹಾಗೂ ಸಂಸ್ಕೃತಿ ವೈಶಿಷ್ಟತೆ ಅರಿಯಬೇಕು. ಗ್ರಾಮೀಣ ಪ್ರದೇಶದಲ್ಲಿರುವ ಜ್ಞಾನ ಮತ್ತು ಕೌಶಲ್ಯಗಳನ್ನು ವೈಜ್ಞಾನಿಕ ಸಂಶೋಧನೆಗೂ ಬಳಸಬಹುದು ಎಂದು ಹೇಳಿದರು.

ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ಡಾ| ಎಂ.ಬಿ. ಚೆಟ್ಟಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ನೂತನ ಆವಿಷ್ಕಾರ ಹಾಗೂ ಸಂಶೋಧನೆಗಳ ಮೂಲಕ ಅ ಕ ಇಳುವರಿ ತರವ ನಿಟ್ಟಿನಲ್ಲಿ ಶ್ರಮಿಸಬೇಕು. ಜೈವಿಕ ತಂತ್ರಜ್ಞಾನ ಬಳಸಿಕೊಳ್ಳುವ ಹಿನ್ನೆಲೆಯಲ್ಲಿ ಹೆಚ್ಚಿನ ಗಮನ ಹರಿಸಬೇಕು. ಜೈವಿಕ ತಂತ್ರಜ್ಞಾನಗಳ ಅವಿಷ್ಕಾರಗಳ ಸಂಶೋಧನೆಗೆ ಕಾರ್ಯಗಳು ನಡೆಯಬೇಕು ಎಂದು ಹೇಳಿದರು.

ವಿವಿ ಕುಲಪತಿ ಡಾ| ಪಿ.ಎಂ. ಸಾಲಿಮಠ ಮಾತನಾಡಿ, ಪ್ರತಿ ಚಟುವಟಿಕೆಗಳಿಗೂ ವಿಜ್ಞಾನವೇ ಆಧಾರ. ಕೃಷಿ ಅಭಿವೃದ್ಧಿಗಾಗಿ
ವಿಜ್ಞಾನ ಅಗತ್ಯ ಎಂದು ಹೇಳಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (ಕೆಎಸ್‌ಟಿಎ) ವೈಜ್ಞಾನಿಕ ಅಧಿಕಾರಿ ಎ.ಎಂ. ರಮೇಶ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಕಾರ್ಯಕ್ರಮ ಅಕಾಡೆಮಿ ನಡೆಸುತ್ತಿದೆ. ಮೂಲ ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದಲೇ 2006ರಿಂದ ಈವರೆಗೂ ಸತತ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ರಾಜ್ಯದ ಜಿಲ್ಲೆಗಳಲ್ಲಿ ನಡೆಸುತ್ತಾ ಬರಲಾಗಿದೆ ಎಂದು ವಿವರಿಸಿದರು.

Advertisement

ರಾಷ್ಟ್ರೀಯ ಸಮ್ಮೇಳನದಲ್ಲಿ ವಿಜ್ಞಾನಿಗಳು ರಚಿಸಿದ ವೈಜ್ಞಾನಿಕ ಲೇಖನಗಳನ್ನು ಬಿಡುಗಡೆಗೊಳಿಸಲಾಯಿತು. ಕೃಷಿ ವಿವಿ ಪ್ರಕಟಣೆ ವಿಭಾಗ ಸಂಪಾದಕ ಡಾ| ಪ್ರಮೋದ ಕಟ್ಟಿ, ಕೃಷಿ ವಿವಿ ಡೀನ್‌ ಡಾ| ಎಂ.ಜಿ. ಪಾಟೀಲ, ಕೆಎಸ್‌ಟಿಎ ಸದಸ್ಯ ಸಂಚಾಲಕ ಹಾಗೂ ಕೀಟಶಾಸ್ತ್ರ ಪ್ರಾಧ್ಯಾಪಕ ಡಾ| ಎ.ಜಿ. ಶ್ರೀನಿವಾಸ, ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯರಾದ ಡಾ| ಎಂ. ಶೇಖರಗೌಡ, ಅಮರೇಶ ಬಲ್ಲಿದವ, ಸಿದ್ದಪ್ಪ ಭಂಡಾರಿ, ವೀರನಗೌಡ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next