Advertisement

ಶಿಕ್ಷಣ ವ್ಯವಸ್ಥೆ ಭವಿಷ್ಯದ ಗುರಿ ಹೊಂದಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು

07:19 PM Sep 03, 2022 | Team Udayavani |

ನವದೆಹಲಿ: ದೇಶದಲ್ಲಿ ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳನ್ನು ಭವಿಷ್ಯಕ್ಕೆ ಸಿದ್ಧವಾಗಿಸುವಂತಿರಬೇಕು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಈ ರೀತಿಯ ಶಿಕ್ಷಣ ವ್ಯವಸ್ಥೆ ಬಂದರೆ ಹೆಚ್ಚಿನ ಲಾಭವಾಗಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.

Advertisement

ಶನಿವಾರ ದೆಹಲಿಯ ಐಐಟಿಯಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುರ್ಮು ಅವರು ಈ ಮಾತುಗಳನ್ನಾಡಿದ್ದಾರೆ. “ಭಾರತದಲ್ಲಿ ಅತ್ಯದ್ಭುತ ಪ್ರತಿಭೆಗಳಿವೆ. ಆದರೆ ಅದನ್ನು ನಾವು ಸಂಪೂರ್ಣವಾಗಿ ಉಪಯೋಗಿಸಿಕೊಳ್ಳಬೇಕಿದೆ. ಇದಕ್ಕೆ ಭವಿಷ್ಯ ಸಿದ್ಧ ಶಿಕ್ಷಣ ನೀತಿ ಅಳವಡಿಸಿಕೊಳ್ಳುವುದು ಅಗತ್ಯ.

ಐಐಟಿಗಳು ಶಿಕ್ಷಣ ಹಾಗೂ ತಂತ್ರಜ್ಞಾನದಲ್ಲಿ ಭಾರತದ ಸಾಮರ್ಥ್ಯವನ್ನು ವಿಶ್ವಕ್ಕೆ ತೋರಿಸಿವೆ. ಜಾಗತಿಕ ಮಟ್ಟದಲ್ಲಿ ಭಾರತವನ್ನು ಎತ್ತರಕ್ಕೇರಿಸುವಲ್ಲಿ ಐಐಟಿಗಳ ಪಾಲು ಹೆಚ್ಚಿದೆ’ ಎಂದೂ ರಾಷ್ಟ್ರಪತಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next