Advertisement
ಅವರು ಬಿಲ್ಲಾಡಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಆಶ್ರಯದಲ್ಲಿ, ಕೊಡಗಾರಕೆರೆ ಅಭಿವೃದ್ಧಿ ಸಮಿತಿ ಸಹಕಾರದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಅಭಿವೃದ್ಧಿಗೊಂಡ ಕೊಡಗಾರಕೆರೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಪೂಜ್ಯ ವಿರೇಂದ್ರ ಹೆಗ್ಗಡೆಯವರು ಕೆರೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದಾರೆ. ಹೀಗಾಗಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಮ್ಮ ಗ್ರಾಮ-ನಮ್ಮ ಕೆರೆ ಯೋಜನೆಯಡಿ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 14.43ಕೋಟಿ ವೆಚ್ಚದ್ಲಲಿ 187 ಕೆರೆಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಅಭಿವೃದ್ಧಿಗೊಂಡ ಕೆರೆಗಳನ್ನು ಕೃಷಿ ಇನ್ನಿತರ ಚಟುವಟಿಕೆಗೆ ಬಳಸಿಕೊಳ್ಳಬೇಕು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ತಿಳಿಸಿದರು.
Related Articles
Advertisement
ಈ ಸಂದರ್ಭ ಜೀರ್ಣೋದ್ಧಾರಗೊಂಡ ಕೆರೆಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಲಾಯಿತು. ಜಿ.ಪಂ. ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ, ಕೆರೆ ಅಭಿವೃದ್ಧಿ ಸಮಿತಿ ಮುಖ್ಯಸ್ಥ ರಾಘವೇಂದ್ರ ಉಪಸ್ಥಿತರಿದ್ದರು.
ಯೋಜನೆಯ ಮಂದಾರ್ತಿ ವಲಯದ ಮೇಲ್ವಿಚಾರಕ ರವೀಂದ್ರ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ನಿರೂಪಿಸಿ, ತಾಲೂಕು ಯೋಜನಾಧಿಕಾರಿ ದಿನೇಶ್ ವಂದಿಸಿದರು.