Advertisement

ಸಮಾಜದ ಹಿತ ಚಿಂತನೆ ಅಗತ್ಯ: ಕಾಗೋಡು ತಿಮ್ಮಪ್ಪ

04:03 PM Oct 30, 2017 | |

ತೀರ್ಥಹಳ್ಳಿ: ಜಾತಿ ಸಂಘಟನೆಗಳು ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕು. ಸಮಾಜದ ಹಿತಬಯಸುವ ಚಿಂತನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ನಾರಾಯಣಗುರು ನೀಡಿದ ಸಂದೇಶವನ್ನು ಅರ್ಥೈಸಿಕೊಂಡು ಸಮಾಜಕ್ಕೆ ಉತ್ತಮ ಮಾರ್ಗದರ್ಶನ ನೀಡಬಹುದಾಗಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಬದುಕು ಅನುಕರಣೀಯವೆಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

Advertisement

ಪಟ್ಟಣದ ಆರ್ಯ ಈಡಿಗ ಸಮುದಾಯ ಭವನದಲ್ಲಿ ತಾಲೂಕು ಆರ್ಯ ಈಡಿಗ ಸಂಘ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರವರ ಜಯಂತಿ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಶತಮಾನಗಳಿಂದ ಶೋಷಣೆಗೆ ಒಳಗಾದ ಮಹಿಳೆಯವರಿಗೆ ಶೇ.50ರಷ್ಟು ಮೀಸಲು ಒದಗಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಕಾರ್ಯ ಶ್ಲಾಘನೀಯ ಎಂದರು.

ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ಜಾತಿಗೊಂದು ಅಭಿವೃದ್ಧಿ ನಿಗಮ ಸ್ಥಾಪಿಸುವುದು ಅಸಾಧ್ಯವಾಗಿದೆ. ಶಿಕ್ಷಣ ಆರ್ಥಿಕ ಸ್ವಾವಲಂಬನೆಯಿಂದ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಪೀಳಿಗೆ ಮುಂದಾಗಬೇಕೆಂದರು. ರೂ.1.00ಕೋಟಿ ವೆಚ್ಚದ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಮಧು ಬಂಗಾರಪ್ಪ ಶಂಕುಸ್ಥಾಪನೆ ನೆರವೇರಿಸಿ ಬ್ರಹ್ಮಶ್ರೀ ನಾರಾಯಣಗುರು ಸಮಾಜಕ್ಕೆ ನೀಡಿದ ಕೊಡುಗೆ ಹಾಗೂ ಸಂದೇಶವನ್ನು ಇಂದಿನ ಯುವಪೀಳಿಗೆ ಅರಿತುಕೊಳ್ಳಬೇಕಾಗಿದೆ ಎಂದರು.

ಕ್ಷೇತ್ರದ ಶಾಸಕ ಕಿಮ್ಮನೆ ರತ್ನಾಕರ್‌ ಮಾತನಾಡಿ ಸಮಾಜದಲ್ಲಿ ಸಮುದಾಯದವರು ಸೌಹಾರ್ದದಿಂದ ಸಂಘಟನೆಯ ಮೂಲಕ ಸಂಘಟನಾ ಕಾರ್ಯವನ್ನು ನಿರ್ವಹಿಸಬೇಕು. ನಾನು ಶಿಕ್ಷಣ ಮಂತ್ರಿಯಾಗಿದ್ದಾಗ ಬ್ರಹ್ಮಶ್ರೀ ನಾರಾಯಣ ಗುರುರವರ ಬಗ್ಗೆ ಶಾಲಾ ಪಠ್ಯ ಪುಸ್ತಕದಲ್ಲಿ ಅವರ ಬದುಕು ಹಾಗೂ ಪರಿಚಯವನ್ನು ಸೇರಿಸಿದ್ದೇನೆ. ಒಬ್ಬ ಆದರ್ಶ ವ್ಯಕ್ತಿ ಸಮಾಜಕ್ಕೆ ನೀಡಿದ ಕೊಡುಗೆ ಸದಾಕಾಲ ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ ಎಂದರು. ಮಾಜಿ ಶಾಸಕ ಆರಗ ಜ್ಞಾನೇಂದ್ರ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ, ಜಿಲ್ಲಾ ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ, ತಹಶೀಲ್ದಾರ್‌ ಆನಂದಪ್ಪ, ತಾಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ. ರಾಮಚಂದ್ರ, ಮುಖ್ಯ ಉಪನ್ಯಾಸಕ ಡಾ| ಬಿ.ಎಸ್‌. ನಾಗೇಶ್‌ ಹಾಗೂ ಈಡಿಗರ ಸಂಘದ ಪದಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next