Advertisement

ನೀಲಮಣಿ ನೇಮಕ ಪ್ರಶ್ನಿಸಿದ ಅರ್ಜಿ ವಜಾ

10:43 PM Aug 03, 2019 | Lakshmi GovindaRaj |

ಬೆಂಗಳೂರು: ರಾಜ್ಯ ಪೊಲೀಸ್‌ ಮಹಾನಿರ್ದೇಶಕರ (ಡಿಜಿ, ಐಜಿಪಿ) ಹುದ್ದೆಗೆ ನೀಲಮಣಿ ಎನ್‌.ರಾಜು ಅವರನ್ನು ನೇಮಕ ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎನ್‌ ರೆಡ್ಡಿ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ನೀಲಮಣಿ ಎನ್‌.ರಾಜು ಅವರನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಹುದ್ದೆಗೆ ನೇಮಿಸುವಾಗ ಸುಪ್ರೀಂಕೋರ್ಟ್‌ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ.

Advertisement

ಹೀಗಾಗಿ, ರಾಜ್ಯ ಸರ್ಕಾರ 2017ರ ಅಕ್ಟೋಬರ್‌ 31ರ ನೇಮಕಾತಿ ಆದೇಶ ರದ್ದುಪಡಿಸಬೇಕೆಂದು ಕೋರಿ ಎಂ.ಎನ್‌ ರೆಡ್ಡಿ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ (ಸಿಎಟಿ) ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸಿಎಟಿ, ನೀಲಮಣಿ ರಾಜು ಅವರ ನೇಮಕಾತಿ ಆದೇಶ ಸರಿಯಾಗಿದೆ ಎಂದು ಅಭಿಪ್ರಾಯ ಪಟ್ಟು, ರೆಡ್ಡಿಯವರ ಅರ್ಜಿಯನ್ನು ಇತ್ಯರ್ಥಪಡಿಸಿ ಜುಲೈ 17ರಂದು ಆದೇಶ ನೀಡಿತ್ತು.

ಸಿಎಟಿಯ ಈ ಆದೇಶ ಪ್ರಶ್ನಿಸಿ ಎಂ.ಎನ್‌.ರೆಡ್ಡಿ ಅವರು ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಸಿಎಟಿ ಆದೇಶದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯದ 2ನೇ ಹಿರಿಯ ಐಪಿಎಸ್‌ ಅಧಿಕಾರಿಯಾಗಿರುವ ಎಂ.ಎನ್‌.ರೆಡ್ಡಿ ಅವರು ಸದ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next