ಯೂಜೀನ್ (ಯುಎಸ್‌ಎ): ವಿಶ್ವ ಆ್ಯತ್ಲೆಟಿಕ್ಸ್ ಜಾವೆಲಿನ್ ಸ್ಪರ್ಧೆಯಲ್ಲಿ ಭಾರತದ ತಾರೆ ನೀರಜ್ ಚೋಪ್ರಾ ಅವರು ರಜತ ಪದಕಕ್ಕೆ ತೃಪ್ತಿ ಪಟ್ಟರು. ನೀರಜ್ ಗೆ ಪ್ರಬಲ ಸ್ಪರ್ಧೆ ನೀಡಿದ ಆ್ಯಂಡರ್ಸನ್ ಪೀಟರ್ ಮೂರು ಬಾರಿ 90 ಮೀಟರ್ ಗಿಂತ ಹೆಚ್ಚು ಎಸೆದು ಬಂಗಾರದ ಪದಕ ಪಡೆದರು.
ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಪದಕ ಗೆದ್ದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ. ಅಂಜು ಬಾಬಿ ಜಾರ್ಜ್ ಮೊದಲನೇಯವರು.
ಇಂದಿನ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು ಮೊದಲ ಎಸೆತ ಫೌಲ್, ಎರಡನೇ ಎಸೆತ 82.39, ಮೂರನೇ ಎಸೆತವನ್ನು 86.37, ನಾಲ್ಕನೇ ಎಸೆತ 88.13 ಮತ್ತು ಐದನೇ ಎಸೆತ ಫೌಲ್ ಆಯಿತು.
ಶುಕ್ರವಾರ ನಡೆದಿದ್ದ ಮೊದಲ ಸುತ್ತಿನ ನೀರಜ್ ಮೊದಲ ಎಸೆತದಲ್ಲೇ 88.39 ಮೀ. ದೂರವನ್ನು ದಾಖಲಿಸಿ ಪದಕ ಸುತ್ತಿಗೆ ನೆಗೆದದ್ದು ವಿಶೇಷವಾಗಿತ್ತು. ಇವರೊಂದಿಗೆ ಭಾರತದ ಮತ್ತೋರ್ವ ಜಾವೆಲಿನ್ ಎಸೆತಗಾರ ರೋಹಿತ್ ಯಾದವ್ ಕೂಡ ಫೈನಲ್ ಪ್ರವೇಶಿಸಿದ್ದರು.
ರೋಹಿತ್ ಯಾದವ್ ಅವರು ಫೈನಲ್ ಪಂದ್ಯಗಳು 78.72 ಮೀ ಶ್ರೇಷ್ಠ ಎಸೆತದ ಮೂಲಕ ಕೂಟದಲ್ಲಿ 10ನೇ ಸ್ಥಾನಿಯಾದರು.