Advertisement
ಹೌದು. ನೀರಜ್ ಚೋಪ್ರಾ ಅವರ ತಂದೆ ತಾಯಿ ಇದೇ ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಸ್ವತಃ ನೀರಜ್ ಚೋಪ್ರಾ ಅವರು ಟ್ವಿಟ್ಟರ್ ನಲ್ಲಿ ಈ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
Related Articles
Advertisement
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಜಾವೆಲಿಂಗ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು. ಫೈನಲ್ ನಲ್ಲಿ ಅವರು 87.58 ಮೀಟರ್ ದೂರಕ್ಕೆ ಜಾವೆಲಿಂಗ್ ಎಸೆದಿದ್ದರು. ಒಲಿಂಪಿಕ್ಸ್ ನ ಅಥ್ಲೆಟಿಕ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಖ್ಯಾತಿಗೆ ನೀರಜ್ ಚೋಪ್ರಾ ಪಾತ್ರರಾಗಿದ್ದರು.