ವಿಧಾನಪರಿಷತ್ತು: “ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ’ (ನೀಟ್)ಯಲ್ಲಿ ಉತ್ತೀರ್ಣರಾದ ಆರ್ಥಿಕ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಮೀಸಲಾತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೀಟ್ ಪಾಸಾದ ಆರ್ಥಿಕ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ ನೀಡುವುದು ನಮ್ಮ ರಾಜ್ಯದಲ್ಲಿ ಈವರೆಗೆ ಸಾಧ್ಯವಾಗಿಲ್ಲ. ಶೇ.15ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ನೀಟ್ ಪಾಸಾದ ಆರ್ಥಿಕ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ನೀಟ್ ಪಾಸಾದ ಆರ್ಥಿಕ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಜೊತೆಗೂ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸುಧಾಕರ್ ತಿಳಿಸಿದರು.
ಇದನ್ನೂ ಓದಿ:ಆರ್‌ಆರ್‌ಆರ್ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್ ನಟ ಆಮಿರ್ ಖಾನ್
2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿಲ್ಲ. ಅವರು ಬಯಸಿದ ಕಾಲೇಜುಗಳಲ್ಲಿ ಸೀಟು ಸಿಕ್ಕಿದೆ. ಅಷ್ಟೇ ಅಲ್ಲ ಈವರೆಗೆ ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗೂ ಸೀಟು ದೊರೆತಿರುತ್ತದೆ. ಕರ್ನಾಟಕ, ಭಾರತದಷ್ಟೇ ಅಲ್ಲ ಇಡೀ ಪ್ರಪಂಚದಲ್ಲೇ ವೈದ್ಯಕೀಯ ಶಿಕ್ಷಣ ದುಬಾರಿಯಾಗಿದೆ. ನೀಟ್ ಪಾಸಾಗದವರು ಶಿಕ್ಷಣ ಪಡೆಯಲು ವಿದೇಶಕ್ಕೆ ಹೋಗುತ್ತಾರೆ. ರಾಜ್ಯದ 150 ಡಿಎನ್‌ಬಿ ಸೀಟು ಬಿಟ್ಟುಕೊಟ್ಟಿರುವ ಬಗ್ಗೆ ಎನ್‌ಎಂಸಿ ಜೊತೆ ಮಾತುಕತೆ ನಡೆಸುವುದಾಗಿ ಸಚಿವರು ತಿಳಿಸಿದರು.