ಹೊಸದಿಲ್ಲಿ: ಎಂಬಿಬಿಎಸ್, ಬಿಡಿಎಸ್ ಕೋರ್ಸ್ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರಮಟ್ಟದ ‘ನೀಟ್’ ಪ್ರವೇಶ ಪರೀಕ್ಷೆ ಮೇ 6ರಂದು ನಡೆಯಲಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬುಧವಾರದಿಂದಲೇ ಆನ್‌ಲೈನ್ ಮೂಲಕ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ 9ರ ರಾತ್ರಿ 11:50ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಶುಲ್ಕ ಪಾವತಿಸಲು ಮಾ. 10ರ ರಾತ್ರಿ 11:50ರವರೆಗೆ ಕಾಲಾವಕಾಶ ವಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ. ಆದರೆ ಅಸ್ಸಾಂ, ಜಮ್ಮು ಕಾಶ್ಮೀರ, ಮೇಘಾಲಯಗಳ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಿಲ್ಲ ಎಂದು ಸಿಬಿಎಸ್‌ಇ ತಿಳಿಸಿದೆ. ಹೆಚ್ಚಿನ ಮಾಹಿತಿಗೆ
www.cbseneet.nic ಜಾಲತಾಣ ನೋಡುವಂತೆ ಕೋರಲಾಗಿದೆ.