Advertisement
ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜುಲೈ 26 ಮತ್ತು 28 ರಂದು ನೀಟ್ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 1 ರಂದು ಮಧ್ಯಾಹ್ನ 3 ರಿಂದ ರಿಂದ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಜುಲೈ 25ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹವಾಮಾನ ವೈಪರೀತ್ಯ/ ಮಳೆಯ ಕಾರಣದಿಂದ ಗೈರುಹಾಜರಾಗಿದ್ದವರೂ ಸಹ ಆ.1ರಂದು ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬಹುದು ಎಂದು ಅವರು ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈನ್‌ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.