ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ 10 ಕೇಂದ್ರ ಮತ್ತು ಉಡುಪಿ ಜಿಲ್ಲೆಯ ಆರು ಕೇಂದ್ರಗಳಲ್ಲಿ ಸೆ.12ರಂದು ನೀಟ್ ಪರೀಕ್ಷೆ ನಡೆಯಲಿದೆ. ದ.ಕ. ಜಿಲ್ಲೆ ಯಲ್ಲಿ 5,001 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹೆಸರು ನೋಂದಾಯಿಸಿ ಕೊಂಡಿ ದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 2,259 ಮಂದಿ ಪರೀಕ್ಷೆ ಬರೆಯಲಿದ್ದಾರೆ.
ದ.ಕ.: ಪರೀಕ್ಷಾ ಕೇಂದ್ರಗಳು:
ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಎಂಜಿನಿಯರಿಂಗ್ ಮಿಜಾರು, ಕೆನರಾ ಎಂಜಿನಿಯರಿಂಗ್ ಕಾಲೇಜು ಬೆಂಜನ ಪದವು, ಗೋವಿಂದದಾಸ್ ಕಾಲೇಜು ಸುರತ್ಕಲ್, ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ಮಂಗಳೂರು, ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೆಂಜಾರು, ಯೇನಪೊಯ ಸ್ಕೂಲ್ ಜಪ್ಪಿನಮೊಗರು, ಶಾರದಾ ವಿದ್ಯಾಲಯ, ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್, ಅಡ್ಯಾರ್, ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೇರ್ಲಪದವು ವಳಚ್ಚಿಲ್ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಉಡುಪಿ: 6 ಕೇಂದ್ರ:
ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆ, ವಿದ್ಯೋದಯ ಪಿಯು ಕಾಲೇಜು, ಎಸ್‌ಎಂಎಸ್ ಆಂಗ್ಲ ಮಾಧ್ಯಮ ಶಾಲೆ, ಮಾಧವ ಕೃಪಾ ಇಂಗ್ಲಿಷ್ ನರ್ಸರಿ ಆ್ಯಂಡ್ ಹೈಯರ್ ಪ್ರೈಮರಿ ಸ್ಕೂಲ್, ಡಾ| ಎನ್. ಶಂಕರ ಅಡ್ಯಂತಾಯ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆ ಪಡೆಯಲಿದೆ.