Advertisement

ಉಭಯ ಜಿಲ್ಲೆಗಳಲ್ಲಿ ನೀಟ್‌ ಪರೀಕ್ಷೆ ಯಶಸ್ವಿ

12:54 AM Jul 18, 2022 | Team Udayavani |

ಮಂಗಳೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರದಲ್ಲಿ ರವಿವಾರ ಸಾಂಗವಾಗಿ ನಡೆಯಿತು.

Advertisement

ಮಧ್ಯಾಹ್ನ 2.30ರಿಂದ ಸಂಜೆ 5.20ರ ವರೆಗೆ ಹಲವು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಮೊದಲು 3 ಗಂಟೆ ಪರೀಕ್ಷೆ ನಡೆಯುತ್ತಿತ್ತು. ಇದನ್ನು 200 ನಿಮಿಷಗಳಿಗೆ (3 ಗಂಟೆ 20 ನಿಮಿಷ) ಈ ಬಾರಿ ಹೆಚ್ಚಿಸಲಾಗಿದೆ.

ಜಿಲ್ಲೆಯಲ್ಲಿ ಪಿಯು ವಿದ್ಯಾಭ್ಯಾಸ ಮಾಡಿದ ಹೊರ ಜಿಲ್ಲೆಯ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ಮಂಗಳೂರಿಗೆ ಆಗಮಿಸಿದ್ದರು. ಗಡಿನಾಡು ಕಾಸರಗೋಡಿನ ವಿದ್ಯಾರ್ಥಿಗಳು ಕೂಡ ಇಲ್ಲಿ ಪರೀಕ್ಷೆ ಬರೆದರು.

ಬೆಳಗ್ಗೆ 10ರಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಆಗಮಿಸಿದ್ದು, ಹಲವು ಸುತ್ತಿನ ತಪಾಸಣೆ ಬಳಿಕ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಗೆ ತೆರಳಲು ಅವಕಾಶ ನೀಡಲಾಯಿತು. ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಕೆಲವು ಕಾಲೇಜುಗಳಿಂದಲೂ ಪರೀಕ್ಷಾ ಕೇಂದ್ರಗಳಿಗೆ ಬಸ್‌ ವ್ಯವಸ್ಥೆ ಮಾಡಲಾಗಿತ್ತು.

ಪರೀಕ್ಷೆ ಬರೆದ 1,921 ಮಂದಿ
ಉಡುಪಿ: ಜಿಲ್ಲೆಯ ಶಿರ್ವದ ಡಾನ್‌ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆ, ಬ್ರಹ್ಮಾವರದ ಎಸ್‌ ಎಸ್‌ ಎಂ ಆಂಗ್ಲ ಮಾಧ್ಯಮ ಶಾಲೆ, ಉಡುಪಿಯ ವಿದ್ಯೋದಯ ಪಬ್ಲಿಕ್‌ ಸ್ಕೂಲ್‌, ಮಣಿಪಾಲದ ಮಾಧವ ಕೃಪಾ ಪಬ್ಲಿಕ್‌ ಸ್ಕೂಲ್‌ ಹಾಗೂ ಹಾರಾಡಿಯ ಜಿ. ಎಂ. ವಿದ್ಯಾ ನಿಕೇತನ ಶಾಲೆಯಲ್ಲಿ ರವಿವಾರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ ಗಳ ಪ್ರವೇಶಕ್ಕೆ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಗೆ ನೋಂದಾಯಿಸಿಕೊಂಡ 2,197 ವಿದ್ಯಾರ್ಥಿಗಳಲ್ಲಿ 1,921 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಸಂಯೋಜಕರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next