Advertisement

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

01:38 AM May 19, 2024 | Team Udayavani |

ಹೊಸದಿಲ್ಲಿ: ನೀಟ್‌ ಪರೀಕ್ಷಾ ವಿಚಾರದಲ್ಲಿ ಅಕ್ರಮ ಎಸಗುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಹೊಸದಿಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅವರ ಬಳಿಯಿಂದ ಮೊಬೈಲ್‌ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳ ಬಯೋಮೆಟ್ರಿಕ್‌ ವಿವರ ಹೊಂದಾಣಿಕೆ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಬ್ಬರು ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾಗ ಅಕ್ರಮ ಬೆಳಕಿಗೆ ಬಂದಿದೆ. ಪರೀಕ್ಷೆ ವಿಚಾರದಲ್ಲಿ ಬಂಧಿತರು ಉತ್ತರ ಸಹಿತ ಪ್ರಶ್ನೆ ಪತ್ರಿಕೆಗಳನ್ನು ನೀಡಲು 20 ಲಕ್ಷ ರೂ.ಗಳಿಂದ 25 ಲಕ್ಷ ರೂ. ಮೊತ್ತವನ್ನು ಶುಲ್ಕವಾಗಿ ಪಡೆಯುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next