ಚೆನ್ನೈ: ನೀಟ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ವಾಗ್ಧಾಳಿ ನಡೆಸಿದ್ದಾರೆ. “ನೀಟ್ ಪಿಜಿ ಕಟ್ ಆಫ್ ಅಂಕಗಳನ್ನು ಶೂನ್ಯಕ್ಕೆ ಇಳಿಸುವ ಮೂಲಕ ಪರೀಕ್ಷೆಯ ಲಾಭವು ಶೂನ್ಯ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಂತಾಗಿದೆ. ಪರೀಕ್ಷೆಗೂ ಅರ್ಹತೆಗೂ ಯಾವುದೇ ಸಂಬಂಧ ಇಲ್ಲ’ ಎಂದು ಕಿಡಿಕಾರಿದ್ದಾರೆ.
ಇನ್ನೊಂದೆಡೆ, ಈ ಕುರಿತು ಟ್ವೀಟ್ ಮಾಡಿರುವ ಸಚಿವ ಉದಯನಿಧಿ ಸ್ಟಾಲಿನ್, “ನೀಟ್ ಪಿಜಿ ಕಟ್ ಆಫ್ ಅಂಕಗಳನ್ನು ಶೂನ್ಯಕ್ಕೆ ಇಳಿಸುವ ಮೂಲಕ ಈ ರಾಷ್ಟ್ರೀಯ ಪರೀಕ್ಷೆಯ ಪಿತೂರಿಯನ್ನು ಬಹಿರಂಗಪಡಿಸಿದೆ. ಇದರಿಂದ ಪರೀಕ್ಷೆಯ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಪ್ರಶ್ನೆ ಮೂಡಿದೆ’ ಎಂದು ದೂರಿದ್ದಾರೆ.