Advertisement

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

08:00 PM Oct 25, 2021 | Team Udayavani |

ನವದೆಹಲಿ: ಒಬಿಸಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕೋಟಾಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ತೀರ್ಪು ಹೊರಬೀಳುವವರೆಗೂ ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

Advertisement

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವೈದ್ಯಕೀಯ ಸ್ನಾತಕೋತ್ತರ (ಎಂಬಿಬಿಎಸ್‌/ಬಿಡಿಎಸ್‌ ಮತ್ತು ಎಂಡಿ/ಎಂಎಸ್‌/ಎಂಡಿಎಸ್‌) ಸೀಟುಗಳಲ್ಲಿ ಇತರೆ ಹಿಂದುಳಿದ ವರ್ಗದವರಿಗೆ ಶೇ.27 ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10 ಮೀಸಲಾತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಈಗ ಅರ್ಜಿಗಳು ವಿಚಾರಣೆ ಹಂತದಲ್ಲಿರುವಂತೆಯೇ, ಆರೋಗ್ಯ ಸೇವೆಗಳ ಪ್ರಧಾನ ನಿರ್ದೇಶನಾಲಯವು ಅ.25ರಿಂದಲೇ ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭವಾಗುವುದಾಗಿ ಘೋಷಿಸಿತ್ತು.

ಇದನ್ನೂ ಓದಿ:ಗೋ ಕಳ್ಳಸಾಗಾಣಿಕೆ ತಡೆಯಲು ಕ್ರಮಕ್ಕೆ ಆಗ್ರಹ; ರಸ್ತೆ ತಡೆ ಮಾಡಿ ಪ್ರತಿಭಟನೆ

ಈ ಹಿನ್ನೆಲೆಯಲ್ಲಿ ಸೋಮವಾರ ಸ್ಪಷ್ಟನೆ ನೀಡಿರುವ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಎಂ. ನಟರಾಜ್‌, “ಕೋಟಾಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನ ಆದೇಶ ಹೊರಬೀಳುವವರೆಗೂ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಿಸುವುದಿಲ್ಲ’ ಎಂದು ಹೇಳಿದ್ದಾರೆ.

Advertisement

ನ್ಯಾ.ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾ.ಬಿ.ವಿ. ನಾಗರತ್ನಾ ಅವರನ್ನೊಳಗೊಂಡ ನ್ಯಾಯಪೀಠ ಕೂಡ, “ನಿಗದಿತ ದಿನಾಂಕದಲ್ಲೇ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆದರೆ ವಿದ್ಯಾರ್ಥಿಗಳು ಗಂಭೀರ ಸಮಸ್ಯೆಗೆ ಒಳಗಾಗಲಿದ್ದಾರೆ’ ಎಂದು ಅಭಿಪ್ರಾಯಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next