Advertisement

NEET Resultಅಕ್ರಮ ಆರೋಪ; ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ರಮಾನಾಥ ರೈ ಆಗ್ರಹ

10:51 PM Jun 10, 2024 | Team Udayavani |

ಮಂಗಳೂರು: ಈ ಬಾರಿಯ ನೀಟ್‌ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈಗಾಗಲೇ 13 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲೇ ಅತೀ ಹೆಚ್ಚು ಮೆಡಿಕಲ್‌ ಕಾಲೇಜು ಹೊಂದಿರುವ ಜಿಲ್ಲೆ ನಮ್ಮದು. ಹಾಗಾಗಿ ವಿದ್ಯಾರ್ಥಿಗಳ ಪರ ನಿಲ್ಲುವುದು ನಮ್ಮ ಕರ್ತವ್ಯ. ಈಗಾಗಲೇ ಕೇಂದ್ರ ಮಟ್ಟದಲ್ಲಿ ರಾಹುಲ್‌ ಗಾಂಧಿಯವರು ವಿದ್ಯಾರ್ಥಿಗಳ ಹೆತ್ತವರಿಗೆ ಬೆಂಬಲ ಸೂಚಿಸಿದ್ದು, ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶದ ದಿನವೇ ನೀಟ್‌ ಫಲಿತಾಂಶವನ್ನೂ ಪ್ರಕಟಿಸಿರುವ ಹಿಂದೆಯೂ ಹುನ್ನಾರ ಅಡಗಿದೆ. ಫಲಿತಾಂಶದ ಬಳಿಕ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಪ್ರಕರಣದ ಕುರಿಂತೆ ಪಾರದರ್ಶಕ ತನಿಖೆ ಆಗಬೇಕು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಪೂಜಾರಿ ಮಾತನಾಡಿ, ನೀಟ್‌ ಫಲಿತಾಂಶ ವಿಷಯವಾಗಿ ಎನ್‌ಎಸ್‌ಯುಐ ಹೊರತುಪಡಿಸಿ ಉಳಿದ ವಿದ್ಯಾರ್ಥಿ ಸಂಘಟನೆಗಳು ಇನ್ನೂ ಧ್ವನಿ ಎತ್ತದಿರುವುದು ಖೇದಕರ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಶಶಿಧರ ಎಂ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next