Advertisement

ನೀಟ್ : ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ ; ಇಲ್ಲಿದೆ ಸಂಪೂರ್ಣ ಮಾಹಿತಿ

06:46 PM Jan 30, 2022 | Team Udayavani |

ಬೆಂಗಳೂರು : 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ ನೀಟ್ ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Advertisement

ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಫೆ.4ರಂದು ಈ ಮೂರೂ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಿಗ್ಗೆ 10 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಿಗ್ಗೆ 10 ಗಂಟೆಯವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದೆ.

ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆ ವಿವರಿಸಿದೆ.

ಇದನ್ನೂ ಓದಿ : ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ನೇಣಿಗೆ ಶರಣು

Advertisement

Udayavani is now on Telegram. Click here to join our channel and stay updated with the latest news.

Next