Advertisement
ನೀಟ್ ಪರೀಕ್ಷೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಅನಿತಾ ಕಳೆದ ವಾರವಷ್ಟೇ ನೇಣಿಗೆ ಶರಣಾಗಿದ್ದಳು. ತದನಂತರ ರಾಜ್ಯಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಿರಂತರ ಪ್ರತಿಭಟನೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಪ್ರತಿಭಟನೆಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಜತೆಗೆ, ಅನಿತಾ ಸಾವು ಖಂಡಿಸಿ ನಡೆಯುವ ಪ್ರತಿಭಟನೆ ಜನಜೀವನ ಅಸ್ತವ್ಯಸ್ತಗೊಳಿಸದಂತೆ ಸರಕಾರಕ್ಕೆ ಸೂಚಿಸಿ ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿಯೂ ನ್ಯಾಯಪೀಠ ಪ್ರತಿಕ್ರಿಯಿಸಿದೆ. ಈ ಕುರಿತು ತಮಿಳುನಾಡು ಸರಕಾರಕ್ಕೆ ನೋಟಿಸ್ ನೀಡಿದೆ. Advertisement
ನೀಟ್ ವಿರುದ್ಧ ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ಬ್ರೇಕ್
09:20 AM Sep 09, 2017 | Karthik A |
Advertisement
Udayavani is now on Telegram. Click here to join our channel and stay updated with the latest news.