Advertisement

ಕೇಂದ್ರ-ರಾಜ್ಯ ಸರ್ಕಾರಗಳಿಂದ ಅಂಗನವಾಡಿ ನೌಕರರ ಕಡೆಗಣನೆ

05:35 PM Jul 19, 2022 | Shwetha M |

ವಿಜಯಪುರ: ಪ್ರಸ್ತುತ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಅಂಗನವಾಡಿ ನೌಕರರಿಗೆ ಕಾಯಂಮಾತಿ ಮಾಡಬೇಕು. ಮಾಡುವವರೆಗೆ ಕನಿಷ್ಟ ವೇತನ ಜಾರಿ ಮಾಡಬೇಕು. ಸುಪ್ರೀಂಕೋರ್ಟ್‌ ಅಂಗನವಾಡಿ ನೌಕರರಿಗೆ ಗ್ರಾಚ್ಯೂಟಿ ನೀಡಬೇಕು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದಾ ಆಗ್ರಹಿಸಿದರು.

Advertisement

ನಗರದ ಶಿವಶರಣೆ ನಿಂಬೆಕ್ಕ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಂಗನವಾಡಿ ನೌಕರರ ಸಂಘದ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಂಗನವಾಡಿ ನೌಕರರಿಗೆ ತಾರಾತಮ್ಯ ಮಾಡುತ್ತಿವೆ. ಸುಪ್ರೀಂಕೋರ್ಟ್‌ ಆದೇಶ ಜಾರಿಗೆ ತರಲು ಆಗ್ರಹಿಸಿ ಇದೆ ಜು. 26ರಿಂದ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಲಯವಾರು 5 ಜನರು ಕಡ್ಡಾಯವಾಗಿ ಹೋರಾಟದ ಪಾಲ್ಗೊಳ್ಳಬೇಕು ಎಂದರು.

ಸಂಘಟನೆ ರಾಜ್ಯಾಧ್ಯಕ್ಷೆ ಶಾಂತಾ ಘಂಟೆ, ಭೀಮಶಿ ಕಲಾದಗಿ, ಅಣ್ಣಾರಾಯ ಈಳಗೇರ ಮಾತನಾಡಿದರು. ಸಭೆಯಲ್ಲಿ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಸುನಂದಾ ನಾಯಕ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿ‌ನಿ ತಳವಾರ, ಖಜಾಂಚಿಯಾಗಿ ಪ್ರತಿಭಾ ಕುರಡೆ, ಗೌರವಾಧ್ಯಕ್ಷರಾಗಿ ಭಾರತಿ ವಾಲಿ ಅವರನ್ನು ಆಯ್ಕೆ ಮಾಡಲಾಯಿತು. ಸುವರ್ಣಾ ಹಲಗಣಿ, ಗೀತಾ ನಾಯಕ, ಶೋಭಾ ಕಬಾಡೆ, ದಾನಮ್ಮ ಗುಗ್ಗರಿ, ಸರಸ್ವತಿ ಮಠ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next