Advertisement

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

10:10 PM May 01, 2024 | Team Udayavani |

ದಾವಣಗೆರೆ : ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ನೌಕರನನ್ನು ಅಮಾನತು ಮಾಡಲಾಗಿದೆ.

Advertisement

ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನೀಯರ್ ಕಣವಪ್ಪ ಮತ್ತು ನ್ಯಾಮತಿ ತಾಲೂಕು ಯರಗನಾಳ್ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕೇಶ್ ನಾಯ್ಕ ಅಮಾನತು ಆದವರು.

ದಾವಣಗೆರೆ, ಶಿವಮೊಗ್ಗದ ಅಂತರ್ ಜಿಲ್ಲಾ ಚೆಕ್‌ಪೋಸ್ಟ್ ಆದ ಜೀನಹಳ್ಳಿ ಚೆಕ್‌ಪೋಸ್ಟ್‌ಗೆ ಈ ಅಧಿಕಾರಿ, ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ದಾವಣಗೆರೆ ಕ್ಷೇತ್ರಕ್ಕೆ ಆಯೋಗದಿಂದ ನೇಮಕವಾಗಿರುವ ವಿಶೇಷ ವೆಚ್ಚ ವೀಕ್ಷಕಿ ಪ್ರತಿಭಾಸಿಂಗ್ ಮತ್ತು ಹೊನ್ನಾಳಿ ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಅಭಿಷೇಕ್ ಅವರು ಅನಿರೀಕ್ಷಿತವಾಗಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದಾಗ ಚೆಕ್‌ಪೋಸ್ಟ್‌ನ ಕರ್ತವ್ಯದಲ್ಲಿ ಯಾರೂ ಇರಲಿಲ್ಲ. ಈ ಬಗ್ಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ.

ಚುನಾವಣಾ ಕರ್ತವ್ಯ ನಿರ್ಲಕ್ಷ್ಯ ತೋರಿದ ನೌಕರರ ಮೇಲೆ ಪ್ರಜಾ ಪ್ರಾತಿನಿಧ್ಯಕಾಯ್ದೆ 1951 ರ 134 ನಿಯಮದನ್ವಯ ಹಾಗೂ ಸಿಸಿಎ ನಿಯಮ 1957 ರ ನಿಯಮ 10(1)(ಡಿ) ರನ್ವಯ ಅಮಾನತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶಿಸಿದ್ದಾರೆ.

ಇದನ್ನೂ ಓದಿ: WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Advertisement
Advertisement

Udayavani is now on Telegram. Click here to join our channel and stay updated with the latest news.

Next