ಔರಾದ್: ಚುನಾವಣೆ ಕೆಲಸಕ್ಕೆ ನಿರ್ಲಕ್ಷ್ಯ ತೋರಿದ ಇಬ್ಬರು ಅಧಿಕಾರಿಯನ್ನು ಜಿಲ್ಲಾ ಚುನಾವಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಶನಿವಾರ ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ವಿಧಾನಸಭೆ ಚುನಾವಣೆ ಸಂಬಂಧ ನೀತಿ ಸಂಹಿತೆ,ಚೆಕ್ ಪೋಸ್ಟಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಉದೇಶದಿಂದ ಸಭೆ ಆಯೋಜನೆ ಮಾಡಲಾಗಿತ್ತು ಸಭೆಗೆ ಗೈರಾದ ಬಗ್ಗೆ ಇಲಾಖೆಯ ಮೇಲಾಧಿಕಾರಿಗಳಿಗೂ ಮಾಹಿತಿ ನೀಡದೆ ಇರುವ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.
ಸಹಾಯಕ ತೋಟಗಾರಿಕೆ ಅಧಿಕಾರಿ ರಾಜಕುಮಾರ್ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಪ್ರಥಮ ದರ್ಜೆ ಗುಮಾಸ್ತ ವಿಟ್ಠಲ ರಾವ್ ಎನ್ನುವರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಗೋವಿಂದ ರೆಡ್ಡಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಅಮಾನತು ಆಗಿರುವ ಇಬ್ಬರು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ತಮ್ಮ ಕೇಂದ್ರ ಸ್ಥಾನವನ್ನು ಬಳಸುವಂತಿಲ್ಲ ವೆಂದು ಆದೇಶದಲ್ಲಿ ತಿಳಿದ್ದಾರೆ.