Advertisement
ಕೊಣಾಜೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಮಂಗಳವಾರ ಜರಗಿದ ಮಂಗಳೂರು ವಿಶ್ವವಿದ್ಯಾನಿಲಯದ ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಯಕ್ಷಮಂಗಳ ಪ್ರಶಸ್ತಿ ಮತ್ತು ಯಕ್ಷಮಂಗಳ ಕೃತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಲೆ ಮತ್ತು ಸಾಹಿತ್ಯ ಮನಸ್ಸಿಗೆ ಸಂಸ್ಕಾರ ಕೊಡುವ, ಸಮಾಜವನ್ನು ತಿದ್ದುವ ಕೆಲಸ ಮಾಡುತ್ತದೆ. ಇಂತಹ ವಿಚಾರಕ್ಕೆ ಸರಕಾರ ಸರಿಯಾದ ಅನುದಾನ ನೀಡುವ ಮೂಲಕ ಕಲೆ, ಸಾಹಿತ್ಯವನ್ನು ಪ್ರೋತ್ಸಾಹಿಸಬೇಕು ಎಂದರು.
Related Articles
Advertisement
ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಧನಂಜಯ ಕುಂಬಳೆ ಸ್ವಾಗತಿಸಿ ಪ್ರಸ್ತಾವನೆಗೈದರು. ಸಂಶೋಧನಾ ಸಹಾಯಕ ಸತೀಶ್ ಕೊಣಾಜೆ ವಂದಿಸಿದರು. ವಿದ್ಯಾರ್ಥಿಗಳಾದ ಮೈತ್ರಿ ಭಟ್, ಆಶಾ ಎಂ.ಎಚ್. ಸಮ್ಮಾನ ಪತ್ರ ವಾಚಿಸಿದರು. ಸಂಶೋಧನಾ ಅಧಿಕಾರಿ ಡಾ| ರಾಜಶ್ರೀ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಯಕ್ಷಮಂಗಳ ತಂಡದ ವಿದ್ಯಾರ್ಥಿಗಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ಮತ್ತು ದೀವಿತ್ ಎಸ್. ಪೆರಾಡಿ ಇವರಿಂದ ರಾಧಾ ವಿಲಾಸ ಏಕವ್ಯಕ್ತಿ ಯಕ್ಷ ಪ್ರಯೋಗ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 20ರಿಂದ 25 ವಯಸ್ಸಿನವರು ಪ್ರವೇಶಿಸುತ್ತಾರೆ. ಆದರೆ ಪ್ರಾಥಮಿಕ ಶಿಕ್ಷಣ ಪಡೆದ ನಾವು 90ರ ಹರೆಯದಲ್ಲಿ ಯಕ್ಷಮಂಗಳ ಪ್ರಶಸ್ತಿಯ ಮೂಲಕ ವಿಶ್ವವಿದ್ಯಾನಿಲಯದ ಗೌರವಕ್ಕೆ ಪಾತ್ರರಾಗಲು ಯಕ್ಷಗಾನದಂತಹ ಕಲೆಯಲ್ಲಿ ತೊಡಗಿಸಿಕೊಂಡಿದ್ದರಿಂದ ಸಾಧ್ಯವಾಯಿತು. ಇಂತಹ ಗೌರವ ಪಡೆದ ನಾವು ನಿಜವಾಗಿ ಧನ್ಯರು.– ಪೆರುವೋಡಿ ನಾರಾಯಣ ಭಟ್